ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುಜರಾತ್‌ನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಬಸ್-ಲಾರಿಗೆ ಡಿಕ್ಕಿಯಾಗಿ ಆರು ಮಂದಿ ದುರ್ಮರಣ ಹೊಂದಿದ್ದಾರೆ.
ಗುಜರಾತ್ನ ಆನಂದ್ ಬಳಿಯ ಅಹಮದಾಬಾದ್ ವಡೋದರಾ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಜುಲೈ 15 ರಂದು ಬೆಳಿಗ್ಗೆ 4.30 ರ ಸುಮಾರಿಗೆ ಐಷಾರಾಮಿ ಬಸ್‌ಗೆ ಲಾರಿ ಡಿಕ್ಕಿ ಹೊಡೆದಿದೆ. 3 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಬಸ್ ಮಹಾರಾಷ್ಟ್ರದಿಂದ ರಾಜಸ್ಥಾನಕ್ಕೆ ಹೋಗುತ್ತಿತ್ತು. ಆನಂದ್ ಬಳಿ ಬಸ್ ಪಂಕ್ಚರ್ ಆಗಿತ್ತು. ಇದರಿಂದಾಗಿ ಬಸ್ಸಿನ ಚಾಲಕ ಹಾಗೂ ಪ್ರಯಾಣಿಕರು ಬಸ್ಸಿನ ಕೆಳಗೆ ನಿಂತಿದ್ದರು. ಆಗ ಹಿಂದಿನಿಂದ ಲಾರಿಯೊಂದು ಬಸ್‌ಗೆ ಡಿಕ್ಕಿ ಹೊಡೆದಿದೆ. ರಸ್ತೆ ಅಪಘಾತದ ಸುದ್ದಿ ತಿಳಿದ ತಕ್ಷಣ ಆನಂದ ಅಗ್ನಿಶಾಮಕ ದಳ, ಎಕ್ಸ್‌ಪ್ರೆಸ್ ಹೈವೇ ಪೆಟ್ರೋಲಿಂಗ್ ತಂಡ ಮತ್ತು ಆನಂದ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಧಾವಿಸಿದರು.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.