ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ ಚರ್ಚೆ ಮುನ್ನೆಲೆಗೆ ಬಂದಿದ್ದು, ಸಚಿವ ರಾಮಲಿಂಗಾ ರೆಡ್ಡಿ ಈ ಬಗ್ಗೆ ಮಾತನಾಡಿದ್ದಾರೆ. ಬಸ್ ಟಿಕೆಟ್ ದರ ಏರಿಕೆ ಸದ್ಯಕ್ಕಿಲ್ಲ ಎಂದು ಹೇಳಿದ್ದು, ಜನ ಸಾಮಾನ್ಯರು ನಿಟ್ಟುಸಿರು ಬಿಟ್ಟಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜು ಕಾಗೆ ದರ ಏರಿಕೆ ಬಗ್ಗೆ ಹೇಳಿರುವುದು ಅವರ ವೈಯಕ್ತಿಕ ಅಭಿಪ್ರಾಯ. ಸದ್ಯ ಬಸ್ ಟಿಕೆಟ್ ದರ ಏರಿಕೆ ಪ್ರಸ್ತಾವನೆ ನಮ್ಮ ಮುಂದಿಲ್ಲ ಎಂದು ತಿಳಿಸಿದರು. ಭಾನುವಾರ ಮಾಧ್ಯಮಗಳ ಜೊತೆ ಮಾತನಾಡಿದ್ದ ರಾಜು ಕಾಗೆ ಮತ್ತು ಕೆಎಸ್ಆರ್ಟಿಸಿ ನಿಗಮ ಅಧ್ಯಕ್ಷ ಶ್ರೀನಿವಾಸ್ ದರ ಏರಿಕೆಯ ಬಗ್ಗೆ ಮಾತನಾಡಿದ್ದರು.