ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ್ದಾರೆ. ಪರಪ್ಪನ ಅಗ್ರಹಾರದಲ್ಲಿರುವ ದರ್ಶನ್ ನನ್ನುನೋಡಲು ಇಂದು ಪತ್ನಿ ವಿಜಯಲಕ್ಷ್ಮಿ ಬಂದಿದ್ದಾರೆ. ಅತ್ತಿಗೆ ಜೊತೆ ತಮ್ಮ ದಿನಕರ್ ತೂಗುದೀಪ್ ಕೂಡ ಭೇಟಿ ನೀಡಿದ್ದಾರೆ.
ದರ್ಶನ್ ಜೈಲಿಗೆ ಹೋದ ಬಳಿಕ ಪ್ರಕರಣದ ಹೋರಾಟದ ಜವಾಬ್ದಾರಿಯನ್ನು ಪತ್ನಿ ವಿಜಯಲಕ್ಷ್ಮಿ ತೆಗೆದುಕೊಂಡಿದ್ದಾರೆ. ಇದೀಗ ಪ್ರಕರಣದ ಕುರಿತು ಚರ್ಚಿಸಲು ಮತ್ತು ದರ್ಶನ್ ನನ್ನು ನೋಡಲು ವಿಜಯಲಕ್ಷ್ಮಿ ಮತ್ತು ದಿನಕರ್ ಜೊತೆ ಅಕ್ಕನ ಮಗ ಚಂದನ್ ಕೂಡ ಭೇಟಿ ನೀಡಿದ್ದಾರೆ.
ಇನ್ನೂ ಜೈಲು ನಿಯಮಗಳ ಪ್ರಕಾರ, ಒಂದು ವಾರದಲ್ಲಿ ಮೂವರಿಗೆ ಮಾತ್ರ ಭೇಟಿ ಮಾಡಲು ಅವಕಾಶ ಇರುತ್ತದೆ.