ಮಂಗಳೂರಿನ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ ನಟಿ ಕತ್ರಿನಾ ಕೈಫ್: ಸಾಥ್ ನೀಡಿದ ಕ್ರಿಕೆಟಿಗ ಕೆ.ಎಲ್.ರಾಹುಲ್‌, ಆಧ್ಯಾ ಶೆಟ್ಟಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕುತ್ತಾರು ಕೊರಗಜ್ಜನ ಆದಿ ಕ್ಷೇತ್ರದಲ್ಲಿ ಭಾನುವಾರ ನಡೆದ ಹರಕೆಯ ಕೋಲದಲ್ಲಿ ಬಾಲಿವುಡ್ ನ ನಟಿ ಕತ್ರಿನಾ ಕೈಫ್, ಕ್ರಿಕೆಟಿಗ ಕೆ.ಎಲ್ ರಾಹುಲ್ ಸೇರಿದಂತೆ ನಟ ಸುನಿಲ್ ಶೆಟ್ಟಿ ಕುಟುಂಬಸ್ಥರು ಭಾಗಿಯಾಗಿದ್ದಾರೆ.

ನಟಿ ಕತ್ರಿನಾ ಕೈಫ್, ನಟ ಸುನಿಲ್ ಶೆಟ್ಟಿ ಅವರ ಪುತ್ರ ಅಹಾನ್ ಶೆಟ್ಟಿ, ಪುತ್ರಿ ಆಧ್ಯಾ ಶೆಟ್ಟಿ, ಆಕೆಯ ಪತಿ ಕ್ರಿಕೆಟಿಗ ಕೆ.ಎಲ್.ರಾಹುಲ್‌, ಮ್ಯಾಟ್ರಿಕ್ಸ್ ಎಂಟರ್ ಟೈನ್ ಮೆಂಟ್ನ ರೇಷ್ಮಾ ಶೆಟ್ಟಿ, ಕತ್ರಿನಾ ಕೈಫ್ ಹಾಗೂ ವಿ.ಎಂ. ಕಾಮತ್ ಸೇರಿದಂತೆ ಒಟ್ಟು 9 ಮಂದಿ ಮಂಗಳೂರಿಗೆ ಆಗಮಿಸಿದ್ದರು.

ಕುತ್ತಾರು ಮೂಲದ ಮುಂಬೈನ ಉದ್ಯಮಿಯೊಬ್ಬರು ಎರಡು ತಿಂಗಳ ಹಿಂದೆ ಕೊರಗಜ್ಜನ ಆದಿ ಕ್ಷೇತ್ರದಲ್ಲಿ ಹರಕೆ ಕೋಲ ಸೇವೆ ಬರೆಸಿದ್ದರು. ವಿಕಿ ಕೌಶಲ್ ಹೊರತುಪಡಿಸಿ ಉಳಿದೆಲ್ಲರೂ ಕೋಲದಲ್ಲಿ ಭಾಗಿಯಾಗಿದ್ದರು.ಕತ್ರಿನಾ, ರೇಷ್ಮಾ ಶೆಟ್ಟಿ ,ಆಧ್ಯಾ ಶೆಟ್ಟಿ ಕ್ಷೇತ್ರದ ಸಾಂಪ್ರದಾಯಿಕ ಕಟ್ಟುಪಾಡಿನಂತೆ ಕೋಲದಿಂದ ಹೊರಗುಳಿದು ಕಟ್ಟೆಯ ಕಚೇರಿಯಲ್ಲಿ ಉಳಿದುಕೊಂಡರೆ,ರಾಹುಲ್ ಮತ್ತು ಅಹಾನ್ ಶೆಟ್ಟಿ ಕೋಲದಲ್ಲಿ ಭಾಗಿಯಾಗಿದ್ದಾರೆ.

ಭಾನುವಾರ ಸಂಜೆ 6 ಗಂಟೆ ವೇಳೆಗೆ ಕುತ್ತಾರಿಗೆ ಆಗಮಿಸಿದ್ದ ಬಾಲಿವುಡ್ ಕುಟುಂಬ ಮಾಧ್ಯಮಗಳಿಗೆ ಮಾಹಿತಿ ನೀಡದಂತೆ ಕೊರಗಜ್ಜನ ಕ್ಷೇತ್ರದ ಕಚೇರಿ ಪ್ರಮುಖರಲ್ಲಿ ಮನವಿ ಮಾಡಿದ್ದರು. ಅಲ್ಲದೇ ಸ್ಥಳದಲ್ಲಿ ಫೋಟೋ ತೆಗೆಯಲು ಬಿಡದೇ ತೆಗೆದವರನ್ನು ಅಳಿಸುವಂತೆ ವಿನಂತಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!