ಹೊಸದಿಗಂತ ಡಿಜಿಟಲ್ ಡೆಸ್ಕ್:
ಇದೇ ಜೂನ್ 25ರಿಂದ ಜುಲೈ5 ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶ ಪ್ರಕಟವಾಗಿದೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ3 ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಇಂದು(ಜುಲೈ 16) ಪ್ರಕಟಿಸಿದೆ.
ಪರೀಕ್ಷೆಗೆ ಹಾಜರಾಗಿದ್ದ ಒಟ್ಟು 75466 ವಿದ್ಯಾರ್ಥಿಗಳ ಪೈಕಿ 17,911 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇ.21.65 ಬಾಲಕರು ಪಾಸ್ ಆಗಿದ್ದರೆ, ಶೇ. 26.55 ಬಾಲಕಿಯರು ಉತೀರ್ಣರಾಗಿದ್ದಾರೆ. ಈ ಮೂಲಕ ಮತ್ತೊಮ್ಮೆ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ.
ಜೂನ್ 24 ರಿಂದ ಜುಲೈ 5 ರವರೆಗೂ ರಾಜ್ಯದಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ-3 ರ ಮೌಲ್ಯಮಾಪನ ಕಾರ್ಯ ಪೂರ್ಣಗೊಂಡಿದ್ದು, ಫಲಿತಾಂಶ ಪ್ರಕಟವಾಗಿದೆ. NIC ವೆಬ್‌ಸೈಟ್ https://karresults.nic.in ನಲ್ಲಿ ಫಲಿತಾಂಶವನ್ನು ಪ್ರಕಟಿಸಲಾಗಿದೆ.
ದ್ವಿತೀಯ ಪಿಯುಸಿ ಮೊದಲ ವರ್ಷದ ಮೂರನೇ ಪರೀಕ್ಷೆ ರಾಜ್ಯದಲ್ಲಿ ಒಟ್ಟು 248 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಯಿತು. ಸಿಸಿಟಿವಿ ಕಣ್ಗಾವಲಿನಲ್ಲಿ ಪರೀಕ್ಷೆಗಳು ನಡೆದಿದ್ದವು. ಜಿಲ್ಲಾ ಮತ್ತು ತಾಲೂಕು ಹಂತದಲ್ಲಿ ವಿಚಕ್ಷಣ ದಳಗಳನ್ನು ನಿಯೋಜಿಸಲಾಗಿತ್ತು.