ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಎಪಿ ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಸಹಾಯಕ ಬಿಭವ್ ಕುಮಾರ್ ವಿರುದ್ಧ 500 ಪುಟಗಳ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ.
ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಗೌರವ್ ಗೋಯಲ್ ಅವರಿಗೆ ಮುಂದೆ ಚಾರ್ಜ್ ಶೀಟ್ ಸಲ್ಲಿಸಿದರು. ನಂತರ ಬಿಭವ್ ಕುಮಾರ್ ಅವ ನ್ಯಾಯಾಂಗ ಬಂಧನದ ಅವಧಿಯನ್ನು ಜುಲೈ 30 ರವರೆಗೆ ವಿಸ್ತರಿಸಿದರು. ವಿಚಾರಣೆ ವೇಳೆ ಪ್ರಾಸಿಕ್ಯೂಷನ್, ದೋಷಾರೋಪ ಪಟ್ಟಿಯಲ್ಲಿ 50 ಸಾಕ್ಷಿಗಳ ಹೇಳಿಕೆಗಳಿವೆ ಎಂದು ತಿಳಿಸಿತು.
ಭಾರತೀಯ ದಂಡ ಸಂಹಿತೆಯ (IPC) ವಿವಿಧ ನಿಬಂಧನೆಗಳ ಅಡಿಯಲ್ಲಿ ಅಂತಿಮ ವರದಿಯನ್ನು ಸಲ್ಲಿಸಲಾಯಿತು.
ಸಿಎಂ ಕೇಜ್ರಿವಾಲ್ ಆಪ್ತ ಬಿಭವ್ ಕುಮಾರ್ ಅವರು ಮೇ 13 ರಂದು ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಮಾಲೀವಾಲ್ ಅವರ ಹಲ್ಲೆ ನಡೆಸಿದ್ದಾರೆ ಎಂಬ ಆರೋಪವಿದೆ. ಈ ಪ್ರಕರಣದಲ್ಲಿ ಮೇ.16 ರಂದು ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾದ ಬಳಿಕ ಅವರನ್ನು ಮೇ 18 ರಂದು ಬಂಧಿಸಲಾಯಿತು.