ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಮಾನ್ನ ರಾಜಧಾನಿ ಮಸ್ಕತ್ ನಲ್ಲಿರುವ ವಾದಿ ಕಬೀರ್ ಪ್ರದೇಶದ ಮಸೀದಿಯೊಂದರಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಭಾರತೀಯ ಪ್ರಜೆ ಸೇರಿದಂತೆ ಒಟ್ಟು ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ. ನೂರಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಒಮಾನ್’ನ ಶಿಯಾ ಮುಸ್ಲಿಂ ಮಸೀದಿಯ ಮೇಲೆ ಸೋಮವಾರ ತಡರಾತ್ರಿ ನಡೆದ ದಾಳಿಯಲ್ಲಿ ಮೂವರು ದಾಳಿಕೋರರು ಸೇರಿದಂತೆ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
https://x.com/Indemb_Muscat/status/1813212451938451933
ಗುಂಡಿನ ದಾಳಿಯಲ್ಲಿ ಮೃತಪಟ್ಟವರಲ್ಲಿ ನಾಲ್ವರು ಪಾಕಿಸ್ತಾನಿ ಪ್ರಜೆಗಳು ಮತ್ತು ಒಬ್ಬ ಪೊಲೀಸ್ ಸೇರಿದ್ದಾರೆ ಎಂದು ಪಾಕಿಸ್ತಾನ ಮತ್ತು ಒಮಾನ್ ಅಧಿಕಾರಿಗಳು ತಿಳಿಸಿದ್ದಾರೆ. ಭದ್ರತಾ ಸಿಬ್ಬಂದಿ ಸೇರಿದಂತೆ ವಿವಿಧ ರಾಷ್ಟ್ರಗಳ 28 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.