ಗಾಜಾ ಮೇಲೆ ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಕನಿಷ್ಠ 57 ಜನರು ದಾರುಣ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಮತ್ತು ಮಧ್ಯ ಪ್ರದೇಶಗಳಲ್ಲಿ ಇಸ್ರೇಲಿ ದಾಳಿಗೆ ಕನಿಷ್ಠ 57 ಜನರು ಸಾವನ್ನಪ್ಪಿದ್ದಾರೆ ಎಂದು ಪ್ಯಾಲೇಸ್ಟಿನಿಯನ್ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಗಾಜಾ ಪಟ್ಟಿಯಲ್ಲಿ ಇಸ್ರೇಲ್ ದಾಳಿಗಳನ್ನು ಹೆಚ್ಚಿಸುತ್ತಿದೆ ಮತ್ತು ಕದನ ವಿರಾಮ ಒಪ್ಪಂದವನ್ನು ತಲುಪಲು ಅರಬ್ ಮಧ್ಯವರ್ತಿಗಳು ಮತ್ತು ಯುನೈಟೆಡ್ ಸ್ಟೇಟ್ಸ್ ಪ್ರಯತ್ನಗಳನ್ನು ವಿಫಲಗೊಳಿಸುತ್ತಿದೆ ಎಂದು ಪ್ಯಾಲೇಸ್ಟಿನಿಯನ್ ಅಥಾರಿಟಿ ಹಮಾಸ್ ಆರೋಪಿಸಿದೆ. ಹಮಾಸ್ ಹೋರಾಟಗಾರರನ್ನು ಬೇರು ಸಮೇತ ಕಿತ್ತೊಗೆಯಲು ಪ್ರಯತ್ನಿಸುತ್ತಿದೆ ಎಂದು ಇಸ್ರೇಲ್ ಹೇಳಿದೆ.

ಇಸ್ರೇಲ್ ಪಡೆಗಳು ಮೇ ತಿಂಗಳಿನಿಂದ ಸಕ್ರಿಯವಾಗಿರುವ ಗಡಿ ಪಟ್ಟಣವಾದ ರಫಾದಲ್ಲಿ ಮನೆಯೊಂದರ ಮೇಲೆ ನಡೆದ ವೈಮಾನಿಕ ದಾಳಿಯಲ್ಲಿ ಐವರು ಪ್ಯಾಲೆಸ್ಟೀನಿಯನ್ನರು ಕೊಲ್ಲಲ್ಪಟ್ಟರು, ಖಾನ್ ಯೂನಿಸ್‌ನಲ್ಲಿ ಒಬ್ಬ ವ್ಯಕ್ತಿ, ಅವನ ಹೆಂಡತಿ ಮತ್ತು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳವಾರ ದಕ್ಷಿಣ ಗಾಜಾ ಪಟ್ಟಿಯಲ್ಲಿರುವ ಖಾನ್ ಯೂನಿಸ್‌ನಲ್ಲಿ ವಾಹನದ ಮೇಲೆ ಇಸ್ರೇಲಿ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 17 ಪ್ಯಾಲೆಸ್ಟೀನಿಯಾದವರು ಸಾವನ್ನಪ್ಪಿದ್ದಾರೆ. 26 ಮಂದಿ ಗಾಯಗೊಂಡಿದ್ದಾರೆ ಎಂದು ಆರೋಗ್ಯ ಸಚಿವಾಲಯ ವರದಿ ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!