ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮ್ಮ ಮೊದಲ ಮಗುವನ್ನು ಸ್ವಾಗತಿಸಿದ ಎರಡು ತಿಂಗಳ ನಂತರ ದುಬೈ ರಾಜಕುಮಾರಿ ಶೈಖಾ ಮಹ್ರಾ ಮೊಹಮ್ಮದ್ ರಶೆದ್ ಅಲ್ ಮಕ್ತೂಮ್ , ತಮ್ಮ ಪತಿ ಶೇಖ್ ಮನ ಬಿನ್ ಮೊಹಮ್ಮದ್ ಬಿನ್ ರಶೀದ್ ಬಿನ್ ಮನಾ ಅಲ್ ಮಕ್ತೌಮ್‌ಗೆ ಇನ್‌ಸ್ಟಾಗ್ರಾಮ್‌ನಲ್ಲಿ ‘ವಿವಾಹ ವಿಚ್ಛೇದನ’ ನೀಡಿದ್ದಾರೆ.
ಜುಲೈ 16 ರಂದು ರಾಜಕುಮಾರಿ ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ, ತನ್ನ ಪತಿ ನನಗೆ ದ್ರೋಹವೆಸಗಿದ ಕಾರಣ ವಿಚ್ಛೇದನ ನೀಡುತ್ತಿರುವುದಾಗಿ ಹೇಳಿದ್ದಾರೆ.
‘ಪ್ರೀತಿಯ ಗಂಡ, ನೀವು ಇತರ ಸಂಗಾತಿಯೊಂದಿಗೆ ನಿರತರಾಗಿರುವ ಹೊತ್ತಲ್ಲೇ ನಾನು ಈ ಮೂಲಕ ನಮ್ಮ ವಿಚ್ಛೇದನವನ್ನು ಘೋಷಿಸುತ್ತೇನೆ. ನಾನು ನಿಮಗೆ ವಿಚ್ಛೇದನ ನೀಡುತ್ತಿದ್ದೇನೆ. ಕಾಳಜಿ ವಹಿಸಿ. ನಿಮ್ಮ ಮಾಜಿ ಪತ್ನಿ’ ಎಂದು ರಾಜಕುಮಾರಿ ಪೋಸ್ಟ್ ಮಾಡಿದ್ದಾರೆ.
ಶೇಖಾ ಮಹರಾ, ತನ್ನ ಮೊದಲ ಮಗುವಿಗೆ ಜನ್ಮ ನೀಡಿದ ಎರಡು ತಿಂಗಳ ಮೊದಲೇ ಈ ನಿರ್ಧಾರಕ್ಕೆ ಬಂದಿದ್ದಾರೆ. ಶೇಖಾ ಮೆಹರಾ, ಯುನೈಟೆಡ್ ಅರಬ್ ಎಮಿರೇಟ್ಸ್‌ನ ಉಪಾಧ್ಯಕ್ಷ ಮತ್ತು ಪ್ರಧಾನ ಮಂತ್ರಿ ಮತ್ತು ದುಬೈ ಆಡಳಿತಗಾರನ ಮಗಳು.
ಇನ್ಸ್ಟಾಗ್ರಾಮ್ ನಲ್ಲಿ ಈ ಸುದ್ದಿ ವೈರಲ್ ಆಗಿದೆ. ಇಬ್ಬರು ಪರಸ್ಪರ ಅನ್ ಫಾಲೋ ಮಾಡಿದ್ದು, ಒಟ್ಟಿಗಿರುವ ಫೋಟೋಗಳನ್ನು ಡಿಲೀಟ್ ಮಾಡಿದ್ದಾರೆ. ಶೇಖಾ ಮೆಹರಾ ಒಂದು ವರ್ಷದ ಹಿಂದೆ ಮದುವೆಯಾಗಿದ್ದರು.