ಹೊಸದಿಗಂತ ವರದಿ,ಅಂಕೋಲಾ:
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದ ಕಾರಣ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲಾ, ಕಾರವಾರ, ಶಿರಸಿ,ಸಿದ್ದಾಪುರ , ದಾಂಡೇಲಿ, ಯಲ್ಲಾಪುರ ಹಾಗೂ ಜೋಯಿಡಾ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 18 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ.