ದಿಗಂತ ವರದಿ ಶಿವಮೊಗ್ಗ :
ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಜು.18 ರ ಗುರುವಾರವೂ ಶಾಲಾ, ಕಾಲೇಜು ಮತ್ತು ಅಂಗನವಾಡಿಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ.
ಮಳೆ ಕ್ಷೀಣಿಸದೆ ಇರುವುದರಿಂದ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.