ಹೊಸದಿಗಂತ ವರದಿ,ಮಂಗಳೂರು:
ಭಾರೀ ಮಳೆಯಿಂದಾಗಿ ಉಡುಪಿ ಜಿಲ್ಲೆಯ ಬಹುತೇಕ ಪ್ರದೇಶಗಳು ಜಲಾವೃತಗೊಂಡಿವೆ. ಅಲ್ಲದೆ ಮುಂಗಾರು ಮಳೆ ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ಪ್ರಬಲ ಮಳೆಯಾಗುವ ಸಾಧ್ಯತೆಯಿರುವುದರಿಂದ ಕೇಂದ್ರ ಹವಾಮಾನ ಇಲಾಖೆಯು ಜುಲೈ 19 ರಂದು ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿದೆ.
ಆದ್ದರಿಂದ ಮುಂಜಾಗ್ರತೆಯ ಭಾಗವಾಗಿ ಜಿಲ್ಲೆಯಲ್ಲಿರುವ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಜು.19ರ ಶುಕ್ರವಾರ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ರಜೆ ಘೋಷಿಸಿದ್ದಾರೆ.