ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಕರ್ನಾಟಕದ 12 ಅಧಿಕಾರಿಗಳ ಮನೆಗಳ ಮೇಲೆ ದಾಳಿ ಮಾಡಿದ್ದಾರೆ.
ಬೆಂಗಳೂರುನಗರದ ಆರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಇಬ್ಬರು, ಶಿವಮೊಗ್ಗ ಜಿಲ್ಲೆಯ ಇಬ್ಬರು, ಯಾದಗಿರಿ, ತುಮಕೂರಿನಲ್ಲಿ ತಲಾ ಓರ್ವ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ್ದಾರೆ ಎನ್ನುವ ಸಾಕಷ್ಟು ದೂರುಗಳು ಬಂದ ಕಾರಣ ಶೋಧಕಾರ್ತ ಆರಂಭವಾಗಿದೆ. ಒಟ್ಟಾರೆ 100ಕ್ಕೂ ಹೆಚ್ಚು ಅಧಿಕಾರಿಗಳು ಶೋಧಕಾರ್ಯದಲ್ಲಿ ಭಾಗಿಯಾಗಿದ್ದಾರೆ.