ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ಕಾಂಗ್ರೆಸ್ ಹೈಕಮಾಂಡ್ ನಾಯಕರಿಗೆ ಕರ್ನಾಟಕ ಎಟಿಎಂ ಆಗಿದ್ದು, ಕರ್ನಾಟಕ ಮಹರ್ಷಿ ವಾಲ್ಮೀಕಿ ನಿಗಮ ಮಂಡಳಿ ಹಗರಣದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ನಾಯಕರಿಗೆ ಕರ್ನಾಟಕ ರಾಜ್ಯ ಎಟಿಎಂ ಆಗಿದೆ, ಬಳ್ಳಾರಿ ಸೇರಿದಂತೆ ಇತರೆ ರಾಜ್ಯಗಳ ಚುನಾವಣೆಯಲ್ಲಿ ವಾಲ್ಮೀಕಿ ನಿಗಮದ ಹಣವನ್ನು ಬಳಸಲಾಗಿದೆ, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ ಎಂದು ಬಿವೈ ವಿಜಯೇಂದ್ರ ಹೇಳಿದರು.
ಅದರಲ್ಲೂ ಇಡಿ ತನಿಖೆ ಕೈಗೆತ್ತಿಕೊಂಡ ನಂತರ ದಿನದಿಂದ ದಿನಕ್ಕೆ ಹೊಸ ಮಾಹಿತಿಗಳು ಹೊರಬೀಳುತ್ತಿವೆ. ಲೋಕಸಭಾ ಚುನಾವಣೆ ವೇಳೆ ನೆರೆಯ ರಾಜ್ಯಗಳಲ್ಲಿ ಮದ್ಯ ಖರೀದಿಗೆ ಹಣ ಬಳಸಿರುವುದು ಇಂದು ಬೆಳಕಿಗೆ ಬಂದಿದೆ. ಕಾಂಗ್ರೆಸ್ ಸರ್ಕಾರ ಈ ವಿಷಯವನ್ನು ಬೇರೆಡೆಗೆ ತಿರುಗಿಸಲು ಯತ್ನಿಸುತ್ತಿದೆ. ಈ ವಿಚಾರವಾಗಿ ಬಿಜೆಪಿ ಇಂದು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿದೆ ಎಂದು ವಿಜಯೇಂದ್ರ ತಿಳಿಸಿದ್ದಾರೆ.