ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಣಿಪುರದ ಉಖ್ರುಲ್ನಲ್ಲಿ ರಿಕ್ಟರ್ ಮಾಪಕದಲ್ಲಿ 3.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಭೂಕಂಪನದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಭೂಕಂಪದ ಕೇಂದ್ರಬಿಂದುವು ಅಕ್ಷಾಂಶ 25.19 ಉತ್ತರ, ರೇಖಾಂಶ 94.31 ಪೂರ್ವದಲ್ಲಿ 30 ಕಿಲೋಮೀಟರ್ ಆಳದಲ್ಲಿದೆ ಎಂದು ವರದಿಯಾಗಿದೆ.
ಸದ್ಯ ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ಇನ್ನೂ ವರದಿಯಾಗಿಲ್ಲ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.