ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾವೇರಿ ಜಲಾನಯನ ಪ್ರದೇಶದಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹಳೆ ಮೈಸೂರು ಭಾಗದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ ಎಸ್ ಅಣೆಕಟ್ಟೆಗೆ ಕೇವಲ ಎಂಟು ಅಡಿಯಷ್ಟು ಮಾತ್ರ ಭರ್ತಿಗೆ ಬಾಕಿ ಇದೆ.
ಕೊಡಗು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಕಳೆದ ವಾರ ಭಾರಿ ಮಳೆಯಾಗಿದೆ. ಇದರಿಂದ ಕೆಆರ್ ಎಸ್ ಅಣೆಕಟ್ಟೆಗೆ ಸೇರುತ್ತಿರುವ ನೀರಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.
ಸದ್ಯ ಕೆಆರ್ ಎಸ್ ಅಣೆಕಟ್ಟೆಗೆ 44,617 ಕ್ಯೂಸೆಕ್ ನೀರು ಬರುತ್ತಿದೆ. ಈ ಕಾರಣದಿಂದ ಗರಿಷ್ಠ 124.80 ಅಡಿ ಎತ್ತರವಿರುವ ಕೆಆರ್ಎಸ್ ಡ್ಯಾಂ 116.60 ಅಡಿಗಳಿಗೆ ಭರ್ತಿಯಾಗಿದೆ.