ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಮಳೆ ಸುರಿಯುತ್ತಿದ್ದು, ಕುಮಾರಧಾರಾ ತುಂಬಿ ಹರಿಯುತ್ತದೆ. ನದಿಯ ನೀರು ರಸ್ತೆಗೆ ಬಂದಿದ್ದು, ಕುಕ್ಕೆ ಸುಬ್ರಹ್ಮಣ್ಯ -ಪುತ್ತೂರು ರಸ್ತೆಯಲ್ಲಿ ಸಂಚಾರ ಕಡಿತವಾಗಿದೆ.
ಕುಮಾರಧಾರಾ ನದಿ ತಟದ ಸ್ನಾನಘಟ್ಟ ಭಾರೀ ಮಳೆ ಹಿನ್ನಲೆಯಲ್ಲಿ ಮುಳುಗಡೆಯಾಗಿದೆ,ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರ ಸಂಖ್ಯೆಯೂ ವಿರಳವಾಗಿದೆ. ತೀರ್ಥಸ್ನಾನಕ್ಕಾಗಿ ನದಿ ತಟಕ್ಕೆ ತೆರಳದಂತೆ ಭಕ್ತಾಧಿಗಳಿಗೆ ಸೂಚನೆ ನೀಡಲಾಗಿದೆ.
ಸ್ಥಳಕ್ಕೆ ಆಗಮಿಸಿದ ಸುಬ್ರಹ್ಮಣ್ಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಕಾರ್ತಿಕ್,ಕುಕ್ಕೆ ಸುಬ್ರಹ್ಮಣ್ಯ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜು ಅವರು ದೇವಸ್ಥಾನದ ಎಂಟು ಜನ ರಕ್ಷಣಾ ಸಿಬ್ಬಂದಿ ನಿಯೋಜನೆ ಮಾಡಿ ಭದ್ರತೆ ಕಾರ್ಯದಲ್ಲಿ ತೊಡಗಿ ಕೊಂಡಿದ್ದಾರೆ.
ಹೋಮ್ ಗಾರ್ಡ್ ನಾಲ್ಕು ಜನ ಸಿಬಂಧಿಗಳು ಭದ್ರತೆ ಕಾರ್ಯದಲ್ಲಿ ತೊಡಗಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ದಿಂದ ಪುತ್ತೂರು ಕಡೆಗೆ ಯಾವುದೇ ವಾಹನಗಳು ಸಂಚರಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಬ್ಯಾರಿಕೇಡ್ ಅಳವಡಿಸಿ ಭದ್ರತೆ ಒದಗಿಸಿದ್ದಾರೆ.