Wednesday, January 14, 2026
Wednesday, January 14, 2026
spot_img

ಇಂದು ರಾಜ್ಯ ಸರ್ಕಾರದ ಮಹತ್ವದ ವಿಶೇಷ ಸಂಪುಟ ಸಭೆ, ಜಿ ರಾಮ್‌ ಜಿ ಕಾಯ್ದೆ ವಿರುದ್ಧ ನಿರ್ಣಯ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಇಂದು ಮಧ್ಯಾಹ್ನ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ.

ಇಂದು ಬೆಳಗ್ಗೆ 11.30ಕ್ಕೆ ವಿಧಾನ ಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದ್ದ 2025ನೇ ಸಾಲಿನ 27ನೇ ಸಚಿವ ಸಂಪುಟ ಸಭೆಯನ್ನು ಮುಂದೂಡಿ ಇಂದೇ ಮಧ್ಯಾಹ್ನ 12 ಗಂಟೆಗೆ ಕರೆಯಲಾಗಿದೆ ಎಂದು ಸರ್ಕಾರದ ಅಪರ ಕಾರ್ಯದರ್ಶಿ ಪ್ರಕಟಣೆ ಹೊರಡಿಸಿದ್ದಾರೆ.

ರಾಜ್ಯ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ, ಅಧಿಕಾರ ಹಂಚಿಕೆ, ನಿನ್ನೆ ರಾಹುಲ್ ಗಾಂಧಿಯವರು ಮೈಸೂರಿಗೆ ಬಂದು ಹೋದ ಬೆನ್ನಲ್ಲೇ ಸಚಿವ ಸಂಪುಟ ಸಭೆ ನಡೆಯುತ್ತಿರುವುದು ವಿಶೇಷವಾಗಿದೆ.

ಮನರೇಗಾ ಯೋಜನೆ ಬದಲಿಸಿ ವಿಬಿ ಜಿ ರಾಮ್‌ ಜಿ ಕಾಯ್ದೆ ಜಾರಿಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧಿಸುವ ಸಂಬಂಧ ವಿಶೇಷ ಅಧಿವೇಶನ ಕರೆಯಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಬುಧವಾರ ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳುವ ಸಾಧ್ಯತೆಯಿದೆ.

ಸಂಪುಟ ಸಭೆಯಲ್ಲಿ ಇಂದು ಮೊದಲಿಗೆ ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ಜಂಟಿ ಅಧಿವೇಶನ ಕರೆಯಲು ದಿನಾಂಕ ನಿಗದಿಯಾಗಲಿದ್ದು, ಅದೇ ಅಧಿವೇಶನದಲ್ಲಿ ‘ಜಿ ರಾಮ್‌ ಜಿ’ ವಿರುದ್ಧ ಚರ್ಚೆ ನಡೆಸಲಿರುವ ಸರ್ಕಾರ, ಕೇಂದ್ರದ ವಿರುದ್ಧ ನಿರ್ಣಯ ಮಂಡಿಸಲಿದೆ ಎಂದು ತಿಳಿದುಬಂದಿದೆ.

ಸಂಪ್ರದಾಯದಂತೆ ವರ್ಷದ ಮೊದಲ ಅಧಿವೇಶನದಲ್ಲಿ ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕು. ಹೀಗಾಗಿ ಸರ್ಕಾರ ಜ.20 ಹಾಗೂ 21 ರಂದು ಜಂಟಿ ಅಧಿವೇಶನ ಕರೆಯುವ ನಿರೀಕ್ಷೆ ಇದೆ.

Most Read

error: Content is protected !!