ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ನ ಖ್ಯಾತ ನಿರ್ಮಾಪಕರಾದ ಕೃಷ್ಣ ಕುಮಾರ್ ಪುತ್ರಿ ತ್ರಿಶಾ ನಿಧನರಾಗಿದ್ದಾರೆ.
ತ್ರಿಶಾ ಕುಮಾರ್ ಅವರು ಕೇವಲ 20ನೇ ವಯಸ್ಸಿಗೆ ಮೃತಪಟ್ಟಿದ್ದಾರೆ. ಅವರು ಕ್ಯಾನ್ಸರ್ನಿಂದ ಬಳಲುತ್ತಿದ್ದರು. ಅವರನ್ನು ಉಳಿಸಿಕೊಳ್ಳೋಕೆ ಕುಟುಂಬದ ಬಳಿ ಸಾಧ್ಯವಾಗಿಲ್ಲ. ಜುಲೈ 18ರಂದು ತಿಶಾ ನಿಧನ ಹೊಂದಿದ್ದು, ಇಂದು ಕುಟುಂಬದವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ
ಕೃಷ್ಣ ಕುಮಾರ್ ಅವರು ಬಾಲಿವುಡ್ನ ಖ್ಯಾತ ನಿರ್ಮಾಣ ಸಂಸ್ಥೆ ಟಿ-ಸೀರಿಸ್ನ ಭಾಗವಾಗಿದ್ದಾರೆ. ಟಿ-ಸೀರಿಸ್ ನಿರ್ಮಾಣದ ಸಿನಿಮಾಗಳಲ್ಲಿ ಇವರ ಪಾಲೂ ಇರುತ್ತದೆ. ಈ ಹಿನ್ನೆಲೆಯಲ್ಲಿ ಟಿ-ಸೀರಿಸ್ ಕಡೆಯಿಂದ ಸುತ್ತೋಲೆ ರಿಲೀಸ್ ಮಾಡಲಾಗಿದೆ. ‘ಕೃಷ್ಣ ಕುಮಾರ್ ಅವರ ಮಗಳು ತಿಶಾ ಅವರು ತೀರಿಕೊಂಡಿದ್ದಾರೆ. ಅನಾರೋಗ್ಯದ ವಿರುದ್ಧ ಅವರು ಹೋರಾಡುತ್ತಿದ್ದರು. ಈ ಕಷ್ಟದ ಸಮಯದಲ್ಲಿ ಖಾಸಗಿತನವನ್ನು ಗೌರವಿಸಿ’ ಎಂದು ಕೋರಿದ್ದಾರೆ.
ಕೆಲವು ಮೂಲಗಳ ಪ್ರಕಾರ ತಿಶಾ ಅವರು ಕ್ಯಾನ್ಸರ್ ಚಿಕಿತ್ಸೆಗಾಗಿ ಜರ್ಮನಿಗೆ ತೆರಳಿದ್ದರಂತೆ. ಅವರು ಅಲ್ಲಿಯೇ ನಿಧನ ಹೊಂದಿದ್ದಾರೆ. ಅವರ ಪಾರ್ಥಿವ ಶರೀರವನ್ನು ಭಾರತಕ್ಕೆ ತರುವ ಪ್ರಯತ್ನ ನಡೆಯುತ್ತಿದೆ.