ಜಾರ್ಖಂಡ್‌ನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಆದಿವಾಸಿಗಳ ರಕ್ಷಣೆಗೆ ಜನಸಂಖ್ಯೆಯ ಕುರಿತು ಶ್ವೇತಪತ್ರ: ಅಮಿತ್ ಶಾ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಜಾರ್ಖಂಡ್‌ನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಬುಡಕಟ್ಟು ಜನರ ಭೂಮಿ ಮತ್ತು ಹಕ್ಕುಗಳ ರಕ್ಷಣೆಗೆ ಜನಸಂಖ್ಯೆಯ ಕುರಿತು ಶ್ವೇತಪತ್ರ ಹೊರಡಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಶನಿವಾರ ತಿಳಿಸಿದ್ದಾರೆ.

ಜಾರ್ಖಂಡ್‌ನ ತಾರಾ ಮೈದಾನದಲ್ಲಿ ನಡೆದ ಬಿಜೆಪಿಯ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಮಾತನಾಡಿದ ಶಾ, ತೀವ್ರವಾದ ಒಳನುಸುಳುವಿಕೆಯಿಂದ ಜಾರ್ಖಂಡ್‌ನಲ್ಲಿ ಬುಡಕಟ್ಟು ಜನರ ಸಂಖ್ಯೆಯು ಕಡಿಮೆಯಾಗುತ್ತಿದೆ.ಸಾವಿರಾರು ಜನ ಜಾರ್ಖಂಡ್‌ ಒಳಗೆ ನುಸುಳುತ್ತಿದ್ದಾರೆ, ಬುಡಕಟ್ಟು ಜನಾಂಗದ ಯುವತಿಯರನ್ನು ವಿವಾಹವಾಗುತ್ತಿದ್ದಾರೆ, ಪ್ರಮಾಣಪತ್ರಗಳನ್ನು ಪಡೆಯುತ್ತಿದ್ದಾರೆ ಮತ್ತು ಭೂಮಿಯನ್ನು ಖರೀದಿಸುತ್ತಿದ್ದಾರೆ. ಇದರಿಂದಾಗಿ ಸ್ಥಳೀಯ ಜನರಿಗೆ ಉದ್ಯೋಗವಕಾಶಗಳು ಕೈತಪ್ಪುತ್ತಿದೆ. ಸೊರೆನ್‌ ಅವರ ಯೋಜನೆಗಳಿಂದ ಅವರ ಕುಟುಂಬಕ್ಕೆ ಮಾತ್ರ ಲಾಭವಾಗುತ್ತಿದೆಎಂದು ಟೀಕಿಸಿದರು.

ಮತಬ್ಯಾಂಕ್‌ ಮತ್ತು ಓಲೈಕೆ ನೀತಿಯ ಮೂಲಕ ಜಾರ್ಖಂಡ್‌ನ ಬುಡಕಟ್ಟು ಮುಖ್ಯಮಂತ್ರಿಯವರು ಲವ್‌ ಜಿಹಾದ್‌ ಮತ್ತು ಲ್ಯಾಂಡ್‌ ಜಿಹಾದ್‌ಗಳಲ್ಲಿ ಭಾಗಿಯಾಗಿದ್ದಾರೆ. ಇದು ಜನಸಂಖ್ಯಾ ಬದಲಾವಣೆಗೆ ಕಾರಣವಾಗುತ್ತಿದೆ ಎಂದು ಮುಖ್ಯಮಂತ್ರಿ ಹೇಮಂತ್‌ ಸೊರೆನ್‌ ಅವರ ಹೆಸರೆತ್ತದೆ ಪರೋಕ್ಷವಾಗಿ ಆರೋಪಿಸಿದರು.

ಲೋಕಸಭೆ ಚುನಾವಣೆಯಲ್ಲಿ 81 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿಯು 52 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಆದ್ದರಿಂದ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!