ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಮತ್ತೆ ಭೂಕುಸಿತ, ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಾದ್ಯಂತ ವರುಣ  ಕಳೆದ ನಾಲ್ಕು ದಿನದಿಂದ ಅಬ್ಬರಿಸಿ ಇಂದು  ಕೊಂಚ ವಿರಾಮ ನೀಡಿದ್ದಾನೆ.

ಮಳೆನಿಂತರೂ ಮಳೆಯಿಂದ ಅವಾಂತರಗಳ ಸರಮಾಲೆಗಳೇ ಸೃಷ್ಟಿಯಾಗಿದ್ದು ಜನ ವರುಣಾರ್ಭಟಕ್ಕೆ ಕಂಗೆಟ್ಟು ಹೋಗಿದ್ದಾರೆ. ಪಶ್ಚಿಮ ಘಟ್ಟಗಳ ಸಾಲಿನಲ್ಲಿರುವ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಮತ್ತೆ ಗುಡ್ಡ ಕುಸಿತವಾಗಿದೆ. ಈ ಹಿನ್ನೆಲೆಯಲ್ಲಿ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧಿಸಲಾಗಿದೆ.

ಚಿಕ್ಕಮಗಳೂರು ನಗರದಿಂದ ದತ್ತಪೀಠಕ್ಕೆ ಸಂಪರ್ಕಿಸುವ ಮಾರ್ಗದಲ್ಲಿ ಕವಿಕಲ್‌ ಗಂಡಿ ಬಳಿ ಗುಡ್ಡ ಕುಸಿದಿದೆ. ರಸ್ತೆ ಮೇಲೆ ಮಣ್ಣು ಮತ್ತು ಕಲ್ಲು ಬಿದ್ದಿವೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ದತ್ತಪೀಠಕ್ಕೆ ಪ್ರವಾಸಿಗರನ್ನು ನಿರ್ಬಂಧಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!