ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ಬೆಂಗಳೂರಿಗರ ಬಹುದೊಡ್ಡ ಹಾಗೂ ಪ್ರತಿದಿನ ಸಮಸ್ಯೆ ಟ್ರಾಫಿಕ್‌ನ್ನು ಸಚಿವ ದಿನೇಶ್ ಗುಂಡೂರಾವ್ ಕೂಡ ಅನುಭವಿಸುವಂತಾಗಿದೆ. ಇದರಿಂದಾಗಿ ಫ್ಲೈಟ್ ಮಿಸ್ ಆಗಿದ್ದು, ಮಂಗಳೂರು ಭೇಟಿ ರದ್ದಾಗಿದೆ.
ಇಂದು ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಬೇಕಿತ್ತು. ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಿಂ ಮಂಗಳೂರಿಗೆ ತೆರಳಬೇಕಿತ್ತು. ಆದ್ರೆ, ಬೆಂಗಳೂರು ಏರ್‌ಪೋರ್ಟ್ ರೋಡ್ ಬ್ಲಾಕ್ ಆದ ಹಿನ್ನೆಲೆಯಲ್ಲಿ ದಿನೇಶ್ ಗುಂಡೂರಾವ್ ಟ್ರಾಫಿಕ್ನಲ್ಲಿ ಸಿಲುಕಿಕೊಂಡಿದ್ದಾರೆ. ಅತ್ತ ಅವರು ಪ್ರಯಾಣಿಸಬೇಕಿದ್ದ ವಿಮಾನ ಸಹ ಟೇಕಾಫ್ ಆಗಿದೆ. ಹೀಗಾಗಿ ವಿಮಾನ ಮಿಸ್ ಆಗಿದ್ದರಿಂದ ದಿನೇಶ್ ಗುಂಡೂರಾವ್ ಅವರು ಮಂಗಳೂರು ಜಿಲ್ಲಾ ಪ್ರವಾಸ ರದ್ದಾಗಿದೆ.
ಅದ್ಯಪಾಡಿ, ಕೆತ್ತಿಕಲ್, ಪಾಣೆಮಂಗಳೂರು ಪ್ರದೇಶಗಳಿಗೆ ಭೇಟಿ ನೀಡಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳನ್ನು ಪರಿಶೀಲನೆ ನಡೆಸಬೇಕಿತ್ತು. ಮಳೆ ಹಾನಿ, ಪರಿಹಾರ ಕಾರ್ಯಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಿಗದಿಯಾಗಿತ್ತು. ಇದಕ್ಕಾಗಿ ಸಿದ್ಧತೆಯನ್ನೂ ಕೈಗೊಳ್ಳಲಾಗಿತ್ತು. ಆದ್ರೆ, ಬೆಂಗಳೂರು ಏರ್ ಪೋರ್ಟ್ ರಸ್ತೆಯಲ್ಲಿ ಲಾರಿ ಸಿಲುಕಿ ವಾಹನ ದಟ್ಟಣೆ ಉಂಟಾಗಿದ್ದರಿಂದ ದಿನೇಶ್ ಗುಂಡೂರಾವ್ ಅವರು ತಡವಾಗಿ ಬಂದಿದ್ದಾರೆ.