ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರಾಖಂಡ್ ರಾಜ್ಯದಲ್ಲಿರುವ ಕೇದಾರನಾಥ ಮಂದಿರಕ್ಕೆ ಹೋಗುವ ಗೌರಿಕುಂಡ್ ದಾರಿಯಲ್ಲಿ ಭೂಕುಸಿತ ಸಂಭವಿಸಿ ಮೂವರು ಯಾತ್ರಿಕರು ಮೃತಪಟ್ಟಿದ್ದಾರೆ.
ಭಾನುವಾರ ಬೆಳಗ್ಗೆ ಸಂಭವಿಸಿದ ಈ ದುರಂತದಲ್ಲಿ ಎಂಟಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗೌರಿಕುಂಡ್ನಿಂದ ಕೇದಾರನಾಥಕ್ಕೆ ಕಾಲುದಾರಿಯಲ್ಲಿ ಯಾತ್ರಿಕರು ನಡೆದುಕೊಂಡು ಹೋಗುವ ಸಂದರ್ಭದಲ್ಲಿ ಚೀರ್ಬಾಸ ಎಂಬ ಪ್ರದೇಶದಲ್ಲಿ ಭೂಕುಸಿತ ಘಟಿಸಿರುವುದು ವರದಿಯಾಗಿದೆ.
ರಕ್ಷಣಾ ತಂಡ ಧಾವಿಸಿ ಹೋಗಿದ್ದು, ಕೆಲವರನ್ನು ರಕ್ಷಿಸಲು ಯಶಸ್ವಿಯಾಗಿದೆ. ಎಂಟು ಮಂದಿಗೆ ಗಾಯಗಳಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಹಾರಾಷ್ಟ್ರದ ನಾಗಪುರದ ಅರುಣ್ ಪರಟೆ (31 ವರ್ಷ) ಮತ್ತು ಜಲ್ನಾ ಜಿಲ್ಲೆಯ ಸುನೀಲ್ ಮಹಾದೇವ್ ಕಾಳೆ (24 ವರ್ಷ) ಹಾಗು ಉತ್ತರಾಖಂಡ್ನ ತಿಲ್ವಾರದ ಅನುರಾಗ್ ಬಿಷ್ತ್ ಅವರು ಮೃತರು. ಉತ್ತರಾಖಂಡ್ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.