ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಎನ್ಸಿಪಿ (ಎಸ್ಪಿ) ಮುಖ್ಯಸ್ಥ ಶರದ್ ಪವಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಅವರು “ಭಾರತದ ರಾಜಕೀಯದಲ್ಲಿ ಭ್ರಷ್ಟಾಚಾರದ ದೊಡ್ಡ ಮಾಸ್ಟರ್ಮೈಂಡ್” ಎಂದು ಆರೋಪಿಸಿದ್ದಾರೆ.
“ಪ್ರತಿಪಕ್ಷಗಳು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದಾರೆ, ಭಾರತದ ರಾಜಕೀಯದಲ್ಲಿ ಭ್ರಷ್ಟಾಚಾರದ ಅತಿದೊಡ್ಡ ಮಾಸ್ಟರ್ ಮೈಂಡ್ ಶರದ್ ಪವಾರ್ ಮತ್ತು ಅದರಲ್ಲಿ ನನಗೆ ಯಾವುದೇ ಗೊಂದಲವಿಲ್ಲ, ಅವರು ಈಗ ನಮ್ಮ ಮೇಲೆ ಏನು ಆರೋಪ ಮಾಡುತ್ತಾರೆ? ಭ್ರಷ್ಟಾಚಾರವನ್ನು ಸಾಂಸ್ಥಿಕಗೊಳಿಸುವ ಕೆಲಸವನ್ನು ಯಾರಾದರೂ ಮಾಡಿದ್ದರೆ, ಶರದ್ ಪವಾರ್ , ಅದು ನೀವೇ” ಎಂದು ಪುಣೆಯಲ್ಲಿ ನಡೆದ ಸಮಾವೇಶದಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಬೆಂಬಲಿಗರನ್ನು ಉದ್ದೇಶಿಸಿ ಶಾ ಹೇಳಿದರು.