ಜಮ್ಮು ಕಾಶ್ಮೀರದಲ್ಲಿ ಸೇನಾ ಶಿಬಿರದ ಮೇಲೆ ಉಗ್ರರ ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಸೇನಾ ಶಿಬಿರದ  ಮೇಲೆ ಉಗ್ರರು  ಗುಂಡಿನ ದಾಳಿ ನಡೆಸಿದ ಪರಿಣಾಮ ಓರ್ವ ಯೋಧ ತೀವ್ರ ಗಾಯಗೊಂಡಿರುವ ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ.

ರಜೌರಿಯ ಹಳ್ಳಿಯಲ್ಲಿ ಉಗ್ರರು ಸೇನಾ ಶಿಬಿರದ ಮೇಲೆ ದಾಳಿ ಮಾಡಿದ್ದಾರೆ. ಮುಂಜಾನೆ ಸುಮಾರು 4 ಗಂಟೆಯ ವೇಳೆಗೆ ದಾಳಿ ನಡೆದಿದೆ ಎಂದು ವರದಿ ತಿಳಿಸಿದೆ. ಈ ವೇಳೆ ಭದ್ರತಾ ಸಿಬ್ಬಂದಿ ಕೂಡ ಉಗ್ರರ ಮೇಲೆ ಪ್ರತಿದಾಳಿ ನಡೆಸಿದ್ದಾರೆ. ಸದ್ಯ ಉಗ್ರರೊಂದಿಗೆ ಗುಂಡಿನ ಚಕಮಕಿ ನಡೆಯುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!