ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾದಯಾತ್ರೆ ಮೂಲಕ ರಾಯರ ದರುಶನಕ್ಕೆ ತೆರಳುತ್ತಿದ್ದ ಭಕ್ತಾದಿಗಳಿಗೆ ಮತಾಂತರಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಬಳಿ ಮತಾಂತರಕ್ಕೆ ಯತ್ನ ನಡೆದಿದ್ದು, ತೆಕ್ಕಲಕೋಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದು, ಮತ್ತೊಬ್ಬ ತಲೆಮರೆಸಿಕೊಂಡಿದ್ದಾನೆ. ಮಂತ್ರಾಲಯಕ್ಕೆ ಪಾದಯಾತ್ರೆ ತೆರಳುತ್ತಿದ್ದ ಯಾತ್ರಿಕರಿಗೆ ಇಬ್ಬರು ಜುಲೈ 18 ರಂದು ಇಸ್ಲಾಂ ಧರ್ಮದ ಬಗ್ಗೆ ಬೋಧನೆ ಮಾಡಿದ್ದಾರೆ ಎಂಬ ಆರೋಪವಿದೆ.
ಯಾತ್ರಾತ್ರಿಗಳಿಬ್ಬರು ಸಿರುಗುಪ್ಪ ರಾಷ್ಟ್ರೀಯ ಹೆದ್ದಾರಿ ಮೂಲಕ ಮಂತ್ರಾಲಯಕ್ಕೆ ತೆರಳುತ್ತಿದ್ದರು. ಇದೇ ವೇಳೆ, ತೆಕ್ಕಲಕೋಟೆ ಪಟ್ಟಣದ ಹುಸೇನ್ ಭಾಷಾ (44), ಸಾಯಿ ಬಾಬಾ (24) ಮತಾಂತರಕ್ಕೆ ಯತ್ನ ಮಾಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.