ಭಾರೀ ಮಳೆಗೆ ಶಿರಸಿ-ಹೊಸನಗರ ರಾಜ್ಯ ಹೆದ್ದಾರಿಯಲ್ಲಿ ಬಿದ್ದ ಹೆಮ್ಮರ, ಸಂಚಾರ ಅಸ್ತವ್ಯಸ್ತ

ದಿಗಂತ ವರದಿ ಬನವಾಸಿ:

ಉತ್ತರ ಕನ್ನಡ ಜಿಲ್ಲೆಯಲ್ಲಿ ಎಡಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಸೋಮವಾರ ಮುಂಜಾನೆ ಬೃಹತ್ ಆಲದ ಮರವೊಂದು ರಾಜ್ಯ ಹೆದ್ದಾರಿಗೆ ಬಿದ್ದು ವಾಹನ ಸಂಚಾರ ಅಸ್ತವ್ಯಸ್ತವಾಗಿದೆ.

ಶಿರಸಿ-ಹೊಸನಗರ ರಾಜ್ಯ ಹೆದ್ದಾರಿಯಲ್ಲಿ ಗುಡ್ನಾಪೂರ ಸಮೀಪ ಹಳೆಯದಾದ ಬೃಹತ್ ಪ್ರಮಾಣದ ಆಲದ ಮರ ಬಿದ್ದು ವಾಹನ ಸವಾರರು ಪರದಾಡುವಂತಾಗಿದೆ. ಮರಬಿದ್ದ ಪರಿಣಾಮ ಪೊಲೀಸ್ ಇಲಾಖೆ ಬದಲಿ ಮಾರ್ಗ ಕಲ್ಪಿಸಿ ವಾಹನ ಸಂಚಾರಕ್ಕೆ ಅನುಕೂಲ ಮಾಡಿದ್ದಾರೆ.

ಅರಣ್ಯ ಇಲಾಖೆ, ಪೊಲೀಸ್ ಇಲಾಖೆ, ಗ್ರಾಮ ಪಂಚಾಯತಿ, ಹೆಸ್ಕಾಂ, ಲೋಕೋಪಯೋಗಿ ಇಲಾಖೆಯಿಂದ ಮರ ತೆರವು ಕಾರ್ಯಚರಣೆ ಮಾಡಲಾಗುತ್ತಿದೆ. ಮರಬಿದ್ದು ವಿದ್ಯುತ್ ಕಂಬ, ತಂತಿಗಳಿಗೂ ಹಾನಿ ಉಂಟಾಗಿ ವಿದ್ಯುತ್ ವ್ಯತ್ಯಯುಂಟಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!