ರಸ್ತೆ ಅಪಘಾತ ತಡೆಗಟ್ಟಲು ದಿಟ್ಟ ಹೆಜ್ಜೆ: ಈ ರೂಲ್ಸ್ ಬ್ರೇಕ್ ಮಾಡಿದ್ರೆ ಎಫ್​ಐಆರ್ ಫಿಕ್ಸ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: 

ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿವಿಶೇಷ ಕಾರ್ಯಚರಣೆ ನಡೆಸಲು ಪೊಲೀಸರು ಮುಂದಾಗಿದ್ದಾರೆ. ಮುಖ್ಯವಾಗಿ ಅಪಘಾತಕ್ಕೆ ಕಾರಣವಾಗಿರುವ ಪ್ರಖರ ಬೆಳಕು ಹೊರಹಾಕುವ (ಹೈ ಬೀಮ್ ಲೈಟ್) ಮತ್ತು ಕಣ್ಣು ಕುಕ್ಕುವ ಎಲ್​ಇಡಿ ಲೈಟ್​ ಅಳವಡಿಸಿರುವ ವಾಹನಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲು ರಾಜ್ಯಾದ್ಯಂತ ವಿಶೇಷ ಕಾರ್ಯಚರಣೆ ನಡೆಸಲಾಗಿದೆ.

ಇದೀಗ ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ( ಒನ್​ವೇ), ಫುಟ್​ಬಾತ್​ ಮೇಲೆ ವಾಹನ ಚಾಲನೆ ಬಗ್ಗೆ ವಿಶೇಷ ಕಾರ್ಯಚರಣೆ ಮಾಡಲು ಪೊಲೀಸರಿಗೆ ಸೂಚಿಸಲಾಗಿದೆ.

ಈ ಕುರಿತು ಸಂಚಾರ ಮತ್ತು ರಸ್ತೆ ಸುರಕ್ಷತೆ ಹೆಚ್ಚುವರಿ ಪೊಲೀಸ್​ ಮಹಾ ನಿರ್ದೇಶಕರಾದ ಅಲೋಕ್​ ಕುಮಾರ್​ ಅವರು ಸುತ್ತೋಲೆ ಹೊರಡಿಸಿದ್ದು, ರಸ್ತೆ ಅಪಘಾತ ತಡೆಗಟ್ಟಲು ವಿಶೇಷ ಕಾರ್ಯಚರಣೆ ನಡೆಸುವಂತೆ ಸಂಬಂಧಪಟ್ಟ ಪೊಲೀಸ್​ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ, ಫುಟ್​ಬಾತ್​ ಮೇಲೆ ವಾಹನ ಚಾಲನೆ ಬಗ್ಗೆ ವಿಶೇಷ ಕಾರ್ಯಚರಣೆ ಮಾಡುವುದು, ಇದರ ಜೊತೆಗೆ ಡಿಫೆಕ್ಟಿವ್​ ನಂಬರ್​ ಪ್ಲೇಟ್​ ಮೇಲೆ ಸಹ ಆಗಸ್ಟ್ 1ರಿಂದ ವಿಶೇಷ ಕಾರ್ಯಚರಣೆ ನಡೆಸಲು ಎಲ್ಲಾ ಘಟಕಗಳಲ್ಲಿ ಕ್ರಮ ತೆಗೆದುಕೊಳ್ಳಲು ತಿಳಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿಗಳ ಮೇಲೆ ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ ಮಾಡುವುದು ಜೀವಕ್ಕೆ ಅಪಾಯಕಾರಿಯಾಗಿದ್ದು, ಇಂತಹ ಹೆದ್ದಾರಿಗಳ ಮೇಲೆ ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ ಮಾಡುವವರ ಮೇಲೆ ಬಿಎನ್​ಎಸ್​ 281 ಅಡಿಯಲ್ಲಿ ಮತ್ತು 184 ಐಎಂವಿ ಕಾಯ್ದೆಯಡಿ ಹಾಗೂ ಎಫ್​ಐಆರ್​ ದಾಖಲು ಮಾಡಲು ಕ್ರಮ ಜರುಗಿಸಬೇಕೆಂದು ಖಡಕ್ ಸೂಚನೆ ರವಾನಿಸಿದ್ದಾರೆ.

https://x.com/alokkumar6994/status/1815351046719324601?ref_src=twsrc%5Etfw%7Ctwcamp%5Etweetembed%7Ctwterm%5E1815351046719324601%7Ctwgr%5E077d752dab3d47bb5a73b60cc9c54886511d40ff%7Ctwcon%5Es1_&ref_url=https%3A%2F%2Ftv9kannada.com%2Fkarnataka%2Fpolice-drive-against-wrong-direction-driving-driving-on-footpath-and-defective-number-plates-from-august-1st-karnataka-news-in-kannada-rbj-870422.html

ಬೆಂಗಳೂರು ನಗರ ಸೇರಿದಂತೆ ಇತರೆ ನಗರ ಪ್ರದೇಶಗಳಲ್ಲಿ ವಿರುದ್ಧ ದಿಕ್ಕಿನಲ್ಲಿ ಸಂಚರಿಸುವುದು ಹಾಗು ಫುಟ್​ಬಾತ್​ ಮೇಲೆ ಮೋಟಾರು ಸೈಕಲ್​ಗಳ ಚಾಲನೆ ಮಾಡುವುದು ಬಹಳ ಸಾಮಾನ್ಯವಾಗಿದೆ. ಅದಕ್ಕಾಗಿ ಆಗಸ್ಟ್​ 1ರಿಂದ ಈ ವಿಶೇಷ ಕಾರ್ಯಚರಣೆ ನಡೆಸಬೇಕು. ಇದರ ಜೊತೆ ಜನರಲ್ಲಿ ಮುಂಚಿತವಾಗಿ ಸಾಮಾಜಿಕ ಜಾಲತಾಣಗಳಲ್ಲಿ, ಕರಪತ್ರ, ಧ್ವನಿ ವರ್ದಕ ಉಪಕರಣಗಳ ಮೂಲಕ ಈ ಬಗ್ಗೆ ತಿಳುವಳಿಕೆ ನೀಡಬೇಕೆಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!