ಮಾಜಿ ಶಾಸಕ ಡಾ.ವೀರಬಸವಂತರೆಡ್ಡಿ ಮುದ್ನಾಳ ನಿಧನ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮಾಜಿ ಶಾಸಕ, ಹಿರಿಯ ವೈದ್ಯ ಡಾ.ವೀರಬಸವಂತರೆಡ್ಡಿ ಮುದ್ನಾಳ (76) ಅವರು ಅನಾರೋಗ್ಯರಿಂದ ಸೋಮವಾರ ನಿಧನರಾದರು.

ಕಳೆದ 6 ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಿಸದೆ ನಗರದ ವಿಬಿಆರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಡಾ.ವೀರಬಸವಂತರೆಡ್ಡಿ ಮುದ್ನಾಳ ಅವರು 2004ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಶಾಸಕರಾಗಿದ್ದರು. 2010ರಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಬಿಜೆಪಿ ಪಕ್ಷದ ಹಿರಿಯ ಮುಖಂಡರಾಗಿದ್ದ ಇವರು ಯಾದಗಿರಿ ಜಿಲ್ಲೆ ರಚನೆಯಾಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

https://x.com/BYVijayendra/status/1815371895082242231?ref_src=twsrc%5Etfw%7Ctwcamp%5Etweetembed%7Ctwterm%5E1815371895082242231%7Ctwgr%5E3580f13c44b3e29b5e41cc4d545140c43e19c7c9%7Ctwcon%5Es1_&ref_url=https%3A%2F%2Fvistaranews.com%2Fcondolence%2Fveerabaswanthreddy-mudnal-former-mla-dr-veerabaswanthreddy-mudnal-passes-away%2F699774.html

ಡಾ.ವೀರಬಸವಂತರೆಡ್ಡಿ ಮುದ್ನಾಳ ಅವರ ನಿಧನಕ್ಕೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ. ಪಕ್ಷದ ಮುಖಂಡರು ಹಾಗೂ ಯಾದಗಿರಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಡಾ. ವೀರಬಸವಂತರೆಡ್ಡಿ ಮುದ್ನಾಳ ಅವರ ನಿಧನಕ್ಕೆ ಸಂತಾಪ ಕೋರುವೆ. ವೈದ್ಯಕೀಯ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಅನನ್ಯ ಸೇವೆ ಸಲ್ಲಿಸುತ್ತಾ, ಜನರ ಕಷ್ಟಗಳಿಗೆ ಸದಾ ಸ್ಪಂದಿಸುತ್ತಿದ್ದ ಸರಳ ವ್ಯಕ್ತಿತ್ವದ ಶ್ರೀ ವೀರಬಸವಂತರೆಡ್ಡಿ ಅವರ ಅಗಲಿಕೆಯಿಂದ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ.ಮೃತರ ಕುಟುಂಬ ವರ್ಗದವರಿಗೆ ಹಾಗೂ ಅಭಿಮಾನಿಗಳಿಗೆ ಅಗಲಿಕೆಯ ಆಘಾತದ ನೆರಳಿನಿಂದ ಹೊರಬರುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲೆಂದು ಪ್ರಾರ್ಥಿಸುತ್ತೇನೆ. ಓಂಶಾಂತಿ ಎಂದು ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!