ಸತತ ಏಳನೇ ಬಾರಿಗೆ ಬಜೆಟ್‌ ಮಂಡಿಸಿ ಈ ದಾಖಲೆ ಮುರಿಯಲಿದ್ದಾರೆ ನಿರ್ಮಲಾ ಸೀತಾರಾಮನ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮೋದಿ 3.0 ಸರ್ಕಾರದ ಮೊದಲ ಬಜೆಟ್ ಮಂಡನೆಗೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಇನ್ನೇನು ಕೆಲವೇ ಸಮಯದಲ್ಲಿ ಬಜೆಟ್‌ ಮಂಡನೆ ಆರಂಭವಾಗಲಿದೆ.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ 2024-25ನೇ ಹಣಕಾಸು ವರ್ಷಕ್ಕೆ ಬಜೆಟ್ ಮಂಡಿಸಲಿದ್ದಾರೆ. ಸತತ ಏಳನೇ ಬಾರಿಗೆ ಬಜೆಟ್ ಮಂಡಿಸುವ ಮೂಲಕ ಸಚಿವೆ ನಿರ್ಮಲಾ ಸೀತಾರಾಮನ್ ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಅವರ ದಾಖಲೆಯನ್ನು ಮುರಿದು, ಹೊಸ ಇತಿಹಾಸ ಬರೆಯಲಿದ್ದಾರೆ.

2019 ರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಎನ್‌ಡಿಎ ಸರ್ಕಾರ ಎರಡನೇ ಅವಧಿಗೆ ಅಧಿಕಾರಕ್ಕೆ ಬಂದಾಗ ಭಾರತದ ಮೊದಲ ಪೂರ್ಣ ಸಮಯದ ಮಹಿಳಾ ಹಣಕಾಸು ಸಚಿವರಾಗಿ ನಿರ್ಮಲಾ ನೇಮಕಗೊಂಡರು.

ಅಂದಿನಿಂದ, ಅವರು ಈ ವರ್ಷದ ಫೆಬ್ರವರಿಯಲ್ಲಿ ಮಧ್ಯಂತರ ಸೇರಿದಂತೆ ಆರು ನೇರ ಬಜೆಟ್‌ಗಳನ್ನು ಮಂಡಿಸಿದ್ದಾರೆ. 2024-25 ಹಣಕಾಸು ವರ್ಷದ ಸಂಪೂರ್ಣ ಬಜೆಟ್ (ಏಪ್ರಿಲ್ 2024 ರಿಂದ ಮಾರ್ಚ್ 2025) ಅವರ ಏಳನೇ ಬಜೆಟ್. 1959 ರಿಂದ 1964 ರ ನಡುವೆ ಸತತ ಐದು ಪೂರ್ಣ ಬಜೆಟ್ ಮತ್ತು ಒಂದು ಮಧ್ಯಂತರ ಬಜೆಟ್ ಮಂಡಿಸಿದ ದೇಸಾಯಿ ಅವರ ದಾಖಲೆಯನ್ನು ಮುರಿಯಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!