ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಲ್ಕು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿ, ಕೊಲೆಗೈದ ಘಟನೆ ಮಾಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಪ್ರಕರಣ ಸಂಬಂಧ ಬೆಂಗಳೂರಿನ ಗೌರಿಪಾಳ್ಯದ ಇರ್ಫಾನ್ ಖಾನ್ ವಿರುದ್ಧ ಮಾಗಡಿ ಠಾಣೆ ಪೊಲೀಸರು ಪೋಕ್ಸೊ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆತನನ್ನು ಬಂಧಿಸಿದ್ದಾರೆ.
ಬಾಲಕಿ ಕುಟುಂಬದ ಸಂಬಂಧಿಯಾದ ಇರ್ಫಾನ್ ಆಗಾಗ ಆಕೆಯ ಮನೆಗೆ ಬಂದು ಹೋಗುತ್ತಿದ್ದ. ಇದೇ ರೀತಿ ಜು.20 ರಂದು ಮನೆಗೆ ಬಂದಿದ್ದ ಆತ, ಬಾಲಕಿಗೆ ಐಸ್ ಕ್ರೀಂ ಕೊಡಿಸುವುದಾಗಿ ತನ್ನ ಸ್ಕೂಟರ್‌ನಲ್ಲಿ ಕರೆದೊಯ್ದಿದ್ದಾನೆ.
ಸಂಜೆ 7 ಗಂಟೆಯಾದರೂ ಮಗು ಮನೆಗೆ ಬಾರದಿದ್ದರಿಂದ ಗಾಬರಿಗೊಂಡ ಪೋಷಕರು ವಿಚಾರಿಸಿದಾಗ, ಇರ್ಫಾನ್ ಖಾನ್ ಬಾಲಕಿಯನ್ನ ಕರೆದೊಯ್ಯುತ್ತಿದ್ದ ಬಗ್ಗೆ ಸ್ಥಳೀಯರು ತಿಳಿಸಿದ್ದರು.