ಹೊಸದಿಗಂತ ಡಿಜಿಟಲ್ ಡೆಸ್:
ನಟಿ ರಶ್ಮಿಕಾ ಮಂದಣ್ಣ ಫ್ಯಾನ್ಸ್‌ಗೆ ಸಿಹಿ ಸುದ್ದಿ ಇದಾಗಿದ್ದು, ಒಂದೇ ದಿನ ರಶ್ಮಿಕಾರ ಎರಡು ಸಿನಿಮಾಗಳನ್ನು ನೋಡೋ ಚಾನ್ಸಸ್ ಎದ್ದು ಕಾಣಿಸುತ್ತಿದೆ.
ಪುಷ್ಪ 2’ ಸಿನಿಮಾ ಆಗಸ್ಟ್ 15ರಂದು ರಿಲೀಸ್ ಆಗಬೇಕಿತ್ತು. ಆದರೆ, ಈಗ ಸಿನಿಮಾನ ಡಿಸೆಂಬರ್ 6ರಂದು ರಿಲೀಸ್ ಮಾಡೋದಾಗಿ ತಂಡದವರು ಘೋಷಣೆ ಮಾಡಿದ್ದಾರೆ. ಅದೇ ರೀತಿ ರಶ್ಮಿಕಾ ನಟನೆಯ ‘ಛವಾ’ ಕೂಡ ಡಿಸೆಂಬರ್ 6ಕ್ಕೆ ಬಿಡುಗಡೆ ಕಾಣಲಿದೆ ಎಂದು ಹೇಳಲಾಗುತ್ತಿದೆ. ಈ ಸಿನಿಮಾದಲ್ಲಿ ವಿಕ್ಕಿ ಕೌಶಲ್ ಅವರು ವಿಲನ್ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾ ಛತ್ರಪತಿ ಶಿವಾಜಿ ಅವರ ಮಗ ಸಂಭಾಜಿ ಬಗ್ಗೆ ಇದೆ.
‘ಛವಾ’ ಈ ಮೊದಲೇ ಡಿಸೆಂಬರ್ 6ರಂದು ರಿಲೀಸ್ ಆಗಲಿದೆ ಎಂದು ಹೇಳಲಾಗಿತ್ತು. ‘ಪುಷ್ಪ 2’ ಘೋಷಣೆ ಆದ ಬಳಿಕ ಈ ಚಿತ್ರದ ರಿಲೀಸ್ ದಿನಾಂಕ ಮುಂದಕ್ಕೆ ಹೋಗಬಹುದು ಎಂದು ಅನೇಕರು ಭಾವಿಸಿದ್ದರು. ಆದರೆ ಆ ರೀತಿ ಆಗಿಲ್ಲ. ಈ ಚಿತ್ರ ಕೂಡ ಅಂದುಕೊಂಡಂತೆ ಡಿಸೆಂಬರ್ 6ರಂದು ರಿಲೀಸ್ ಆಗಲಿದೆ ಎಂದು ಹೇಳಲಾಗುತ್ತಿದೆ. ಆಗಸ್ಟ್ 15ರಂದು ಸಿನಿಮಾದ ಮೊದಲ ಗ್ಲಿಂಪ್ಸ್ ರಿಲೀಸ್ ಆಗಲಿದೆ.