ಪ್ರತಿಪಕ್ಷಗಳ ಪ್ರತಿಭಟನೆ ದುರುದ್ದೇಶಪೂರ್ವಕ, ಬಜೆಟ್‌ನಲ್ಲಿ ಯಾವ ಪಕ್ಷವನ್ನೂ ಕಡೆಗಣಿಸಿಲ್ಲ: ನಿರ್ಮಲಾ ಸೀತಾರಾಮನ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಈ ಬಾರಿಯ ಬಜೆಟ್  ಯಾವುದೇ ರಾಜ್ಯವನ್ನು ಕಡೆಗಣಿಸಿಲ್ಲ. ಕಾಂಗ್ರೆಸ್  ನೇತೃತ್ವದ ಪ್ರತಿಪಕ್ಷಗಳು ಉದ್ದೇಶಪೂರ್ವಕವಾಗಿ ನಾಗರಿಕರನ್ನು ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿವೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ರಾಜ್ಯಗಳ ನಡುವೆ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿ ಪ್ರತಿಪಕ್ಷಗಳು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆ ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಪ್ರತಿ ಬಜೆಟ್‌ನಲ್ಲಿ ಈ ದೇಶದ ಪ್ರತಿಯೊಂದು ರಾಜ್ಯವನ್ನು ಹೆಸರಿಸಲು ಅವಕಾಶ ಸಿಗುವುದಿಲ್ಲ. ಈ ಪ್ರತಿಭಟನೆ ದುರುದ್ದೇಶದಿಂದ ಕೂಡಿದೆ ಎಂದರು.

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಂಧವನ್ ಎಂಬ ಪಟ್ಟಣದಲ್ಲಿ ಬಂದರು ಸ್ಥಾಪಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಆದರೆ ಮಂಗಳವಾರದ ತನ್ನ ಬಜೆಟ್ ಭಾಷಣದಲ್ಲಿ ರಾಜ್ಯದ ಹೆಸರನ್ನು ಉಲ್ಲೇಖಿಸಿಲ್ಲ. ಇದರರ್ಥ ಮಹಾರಾಷ್ಟ್ರ ಕಡೆಗಣಿಸಲಾಗಿದೆ ಎಂದರ್ಥವೇ ಎಂದು ಪ್ರಶ್ನಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!