ಲೋಕೊ ಪೈಲಟ್ ಗಳ ಸಮಯ ಪ್ರಜ್ಞೆ: ತಪ್ಪಿತು ರೈಲು ದುರಂತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಂಬಯಿಯಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಮತ್ಸ್ಯ‌ಗಂಧ ಎಕ್ಸ್‌ಪ್ರೆಸ್ ರೈಲಿನ ಲೋಕೊ ಪೈಲಟ್ ಗಳ ಸಮಯ ಪ್ರಜ್ಞೆಯಿಂದ ಬುಧವಾರ ಬೆಳಗ್ಗೆ ಬಾರಕೂರು- ಉಡುಪಿ ನಿಲ್ದಾಣಗಳ ನಡುವೆ ಸಂಭವಿಸಲಿದ್ದ ದೊಡ್ಡ ದುರಂತ ತಪ್ಪಿದೆ.

ಲ್ಲಿ ಬಾರಕೂರು ಹಾಗೂ ಉಡುಪಿ ನಿಲ್ದಾಣಗಳ ನಡುವೆ ಬೆಳಗ್ಗೆ 9:18ಕ್ಕೆ ಮಣಿಪಾಲದ ಪೆರಂಪಳ್ಳಿ ಬಳಿ ದೊಡ್ಡ ಮರವೊಂದು ಭಾರೀ ಮಳೆಯಿಂದ ಹಳಿಗೆ ಅಡ್ಡವಾಗಿ ಬಿದ್ದಿರುವುದನ್ನು ರೈಲಿನ ಲೋಕೋಪೈಲಟ್ ಗಳು ಗಮನಿಸಿದ್ದು, ತಕ್ಷಣವೇ ಎಮರ್ಜೆನ್ಸಿ ಬ್ರೇಕ್‌ ಅನ್ನು ಬಳಸಿ ರೈಲನ್ನು ನಿಲ್ಲಿಸುವಲ್ಲಿ ಯಶಸ್ವಿಯಾದರು.

ಹಳಿಯಲ್ಲಿ ಬಿದ್ದ ಮರ ಪೈಲಟ್‌ಗಳ ಗಮನಕ್ಕೆ ಬರುವುದು ಸ್ವಲ್ಪ ತಡವಾಗಿದ್ದರೂ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು .ತಕ್ಷಣವೇ ಸ್ಥಳಕ್ಕೆ ಧಾವಿಸಿ ಬಂದ ಒಎಚ್ಇ ತಂಡದವರು ಮರವನ್ನು ಹಳಿಯಿಂದ ತೆಗೆದು ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಸಂಭಾವ್ಯ ಭಾರಿ ಅನಾಹುತವನ್ನು ತಪ್ಪಿಸಿದ ವೃತ್ತಿಪರತೆಯನ್ನು ಗುರುತಿಸಿ, ಕೊಂಕಣ ರೈಲ್ವೇ ಕಾರ್ಪೊರೇಷನ್ ಲಿಮಿಟೆಡ್ ಸಿಎಂಡಿ ಸಂತೋಷ್ ಕುಮಾರ್ ಝಾ ಸಿಬ್ಬಂದಿಗೆ ತಲಾ 15,000 ರೂಪಾಯಿಗಳ ನಗದು ಬಹುಮಾನವನ್ನು ಘೋಷಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!