ಮೂಡ ಹಗರಣ ಚರ್ಚೆಗೆ ಅವಕಾಶ ನಿರಾಕರಣೆ: ಸದನದಲ್ಲಿ ಬಿಜೆಪಿ-ಜೆಡಿಎಸ್​ ಅಹೋರಾತ್ರಿ ಧರಣಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಡಾ ಹಗರಣ ಸಂಬಂಧ ವಿಧಾನಮಂಡಲದ ಉಭಯ ಸದನಗಳಲ್ಲಿ ಚರ್ಚೆಗೆ ಅವಕಾಶ ನೀಡುವಂತೆ ವಿಪಕ್ಷ ಬಿಜೆಪಿ ಕೋರಿದ್ದು, ಆದ್ರೆ ಸಭಾ ನಾಯಕರು ಅವಕಾಶ ನೀಡಿರಲಿಲ್ಲ. ಈ ಹಿನ್ನಲೆಯಲ್ಲಿ 2 ಸದನಗಳಲ್ಲೂ ಅಹೋರಾತ್ರಿ ಧರಣಿಗೆ ಬಿಜೆಪಿ ನಿರ್ಧರಿಸಿದೆ.

ಇಂದು ಬಿಜೆಪಿ, ಸದನದಲ್ಲಿ ಮುಡಾ ಹಗರಣ ಕುರಿತು ಚರ್ಚೆಗೆ ಅವಕಾಶ ಕೊಡಿ ಎಂದು ಕೆಳಮನೆ ಮತ್ತು ಮೇಲ್ಮನೆಯಲ್ಲಿ ಒತ್ತಾಯಿಸಿದ್ದಾರೆ. ಆದ್ರೆ, ಬಿಜೆಪಿ ಆಗ್ರಹಕ್ಕೆ ಒಪ್ಪದ ಸ್ಪೀಕರ್, ಪ್ರಶ್ನೋತ್ತರ ಕಲಾಪ ಬದಿಗೊತ್ತಿ ಚರ್ಚೆಗೆ ತೆಗೆದುಕೊಳ್ಳುವಂಥದ್ದು ಏನಿದೆ ಎಂದು ಪ್ರಶ್ನಿಸಿದ್ದು, ರಿಜೆಕ್ಟ್ ಮಾಡಿದನ್ನು ಮತ್ತೆ ಅವಕಾಶ ನೀಡಲ್ಲ ಎಂದಿದ್ದಾರೆ. ಇದರಿಂದ ರೊಚ್ಚಿಗೆದ್ದ ಬಿಜೆಪಿ, ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ ನಡೆಸಲು ತೀರ್ಮಾನಿಸಿದೆ.

ಚರ್ಚೆಗೆ ಸ್ಪೀಕರ್ ಅವಕಾಶ ನೀಡದಿದ್ದರಿಂದ ರೊಚ್ಚಿಗೆದ್ದಿರುವ ಬಿಜೆಪಿ, ಜೆಡಿಎಸ್ ಸದಸ್ಯರು, ವಿಧಾನಸಭೆ ಮತ್ತು ವಿಧಾನಪರಿಷತ್​​ನಲ್ಲಿ ಅಹೋರಾತ್ರಿ ಧರಣಿ ನಡೆಸಲು ತೀರ್ಮಾನಿಸಿದ್ದು, ಈ ಬಗ್ಗೆ ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದಿನಿಂದ ವಿಧಾನಸಭೆ ಮತ್ತು ವಿಧಾನ ಪರಿಷತ್ ನಲ್ಲಿ ಬಿಜೆಪಿ ಜೆಡಿಎಸ್ ಸದಸ್ಯರು ಜಂಟಿ ಅಹೋರಾತ್ರಿ ಹೋರಾಟ ನಡೆಸಲಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!