ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಮಸೂದೆ ಅಂಗೀಕಾರ: ದುಷ್ಕೃತ್ಯ ನಡೆಸಿದ್ರೆ 10 ಲಕ್ಷ ದಂಡ, 5 ವರ್ಷ ಜೈಲು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಇತರ ದುಷ್ಕೃತ್ಯಗಳನ್ನು ತಡೆಯುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಬಿಹಾರ ವಿಧಾನಸಭೆ ಬುಧವಾರ ಅಂಗೀಕರಿಸಿದೆ.

ಬಿಹಾರ ಸಾರ್ವಜನಿಕ ಪರೀಕ್ಷೆಗಳು (ಪಿಇ) (ಅನ್ಯಾಯದ ವಿಧಾನಗಳ ತಡೆಗಟ್ಟುವಿಕೆ) ಮಸೂದೆ, 2024 ಅನ್ನು ರಾಜ್ಯ ಸಂಸದೀಯ ವ್ಯವಹಾರಗಳ ಸಚಿವ ವಿಜಯ್ ಕುಮಾರ್ ಚೌಧರಿ ಮಂಡಿಸಿದರು.

ಪ್ರತಿಪಕ್ಷಗಳ ಸಭಾತ್ಯಾಗದ ನಡುವೆ ಧ್ವನಿ ಮತದೊಂದಿಗೆ ಮಸೂದೆ ಅಂಗೀಕರಿಸಲಾಯಿತು.

ಇನ್ಮುಂದೆ ರಾಜ್ಯದಲ್ಲಿ ಪ್ರಶ್ನೆ ಪತ್ರಿಕೆಗಳ ಸೋರಿಕೆ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ದುಷ್ಕೃತ್ಯಗಳನ್ನು ತಡೆಯುವ ಗುರಿಯನ್ನು ಹೊಸ ಕಾನೂನು ಹೊಂದಿದೆ. ಈ ಮಸೂದೆಯು ಇಂತಹ ದುಷ್ಕೃತ್ಯಗಳಲ್ಲಿ ಭಾಗಿಯಾಗುವವರಿಗೆ ಮೂರರಿಂದ ಐದು ವರ್ಷಗಳ ಜೈಲು ಶಿಕ್ಷೆ ಮತ್ತು 10 ಲಕ್ಷ ರೂ.ಗಳ ದಂಡ ಸೇರಿದಂತೆ ಕಠಿಣ ಶಿಕ್ಷೆಯನ್ನು ವಿಧಿಸುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!