ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಂಜಾಬ್ ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಅವರ ಬೆಂಗಾವಲು ವಾಹನದ ಟೈರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಭದ್ರತಾ ಸಿಬ್ಬಂದಿಗೆ ಗಾಯಗಳಾಗಿವೆ.
ಪಂಜಾಬ್‌ನ ಘರಿಂಡಾ ಗ್ರಾಮಕ್ಕೆ ಬುಧವಾರ ಭೇಟಿ ನೀಡಿದ್ದ ಸಂದರ್ಭಈ ಘಟನೆ ಸಂಭವಿಸಿದೆ.
ರಾಜ್ಯಪಾಲರ ವಾಹನದೊಂದಿಗೆ ಸಾಗುತ್ತಿದ್ದ ಬೆಂಗಾವಲು ಪಡೆಯು ಜೀಪ್‌ನಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಪ್ರಯಾಣಿಸುತ್ತಿದ್ದರು. ಈ ಸಂದರ್ಭ ಟೈರ್ ಸ್ಫೋಟಗೊಂಡಿತು. ವಾಹನವನ್ನು ನಿಯಂತ್ರಣಕ್ಕೆ ತರಲು ಚಾಲಕ ಪ್ರಯತ್ನಿಸುತ್ತಿದ್ದ ಸಂದರ್ಭದಲ್ಲಿ ವಾಹನದಲ್ಲಿದ್ದ ಸಿಬ್ಬಂದಿ ಗಾಯಗೊಂಡಿದ್ದಾರೆ.
ತಕ್ಷಣ ಇವರನ್ನು ಗುರುನಾನಕ್ ದೇವ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ.