ಅಂಗನವಾಡಿ ಕಾರ್ಯಕರ್ತೆಯರಿಗೆ ಶೀಘ್ರದಲ್ಲೇ ಗೌರವಧನ ಹೆಚ್ಚಳ?

ಹೊಸದಿಂತ ಡಿಜಿಟಲ್‌ ಡೆಸ್ಕ್‌:

ಅಂಗನವಾಡಿ ಕಾರ್ಯಕರ್ತೆಯರಿಗೆ ಶೀಘ್ರದಲ್ಲೇ ಸಿಹಿಸುದ್ದಿ ಸಿಗಲಿದೆ. ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಸರ್ಕಾರದ ಮುಂದಾಗಿದ್ದು, ಶೀಘ್ರದಲ್ಲೇ ಹೆಚ್ಚಳ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನ ಹೆಚ್ಚಳಕ್ಕೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು. ಅಂಗನವಾಡಿ ಕಾರ್ಯಕರ್ತೆಯರ ಅನುದಾನ ಮಾತ್ರವಲ್ಲ, ಅಂಗನವಾಡಿ ಕೇಂದ್ರಗಳಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇದ್ದು, ಕೂಡಲೇ ಭರ್ತಿ ಮಾಡಬೇಕೆಂದು ಪ್ರತಿಪಕ್ಷ ನಾಯಕರು ಧ್ವನಿಗೂಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ನೇಮಕಾತಿ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!