ದಿಗಂತ ವರದಿ ಹಾಸನ :
ತೋಟದ ಮನೆಯ ಬಳಿ ನಿಂತಿದ್ದ ವ್ಯಕ್ತಿ ಮೇಲೆ ಕರಡಿ ಡೆಡ್ಲಿ ಅಟ್ಯಾಕ್ ಮಾಡಿ ವ್ಯಕ್ತಿಯ ಇಡೀ ತಲೆಯ ಚರ್ಮವನ್ನೇ ಕಿತ್ತು, ಮುಖವನ್ನು ಗಾಯಗೊಳಿಸಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಬಾಣಾವರ ಹೋಬಳಿ, ಜನ್ನಾವರ ಗ್ರಾಮದಲ್ಲಿ ಘಟನೆ ನಡೆದಿದೆ.
ಮಹಾಲಿಂಗಪ್ಪ (75) ಕರಡಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡ ವೃದ್ದ. ಬೆಳಿಗ್ಗೆ ಸುಮಾರು 6 ಗಂಟೆ ಸಮಯದಲ್ಲಿ ಮನೆಯ ಮುಂದೆ ನಿಂತಿದ್ದ ವೇಳೆ ಕರಡಿ ದಾಳಿ ಮಾಡಿದೆ. ಕರಡಿ ಜೊತೆ ಹೋರಾಡಿ ಪ್ರಾಣ ಉಳಿಸಿಕೊಂಡ ರೈತ ಮಹಾಲಿಂಗಪ್ಪ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.