ಹೊಸದಿಗಂತ ಡಿಜಿಟಲ್ ಡೆಸ್ಕ್:
ವಕೀಲ ದೇವರಾಜೇಗೌಡ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದಾರೆ ಮತ್ತು ಪೆಂಡ್ರೈವ್ ಪ್ರಕರಣದ ಕುರಿತು ಚರ್ಚಿಸಿದ್ದಾರೆ ಎನ್ನಲಾಗಿದೆ.
ಜಾಮೀನು ಪಡೆದು ಜೈಲಿನಿಂದ ಹೊರಬಂದ ನಂತರ ದೇವರಾಜೇಗೌಡ ಮೊದಲ ಬಾರಿಗೆ ಹೆಚ್ ಡಿಕೆ ಭೇಟಿಯಾದರು. ದೆಹಲಿಯ ಕರ್ನಾಟಕ ಭವನಕ್ಕೆ ಭೇಟಿ ನೀಡಿದ್ದಾರೆ.
ಭೇಟಿ ಬಳಿಕ ಪ್ರತಿಕ್ರಿಯಿಸಿದ ದೇವರಾಜೇಗೌಡ,ಪೆಂಡ್ರೈವ್ ಪ್ರಕರಣದ ಕುರಿತು ನಾನು ಮಾತುಕತೆ ನಡೆಸಿದ್ದೇನೆ. ಹಂಚಿಕೆಯಲ್ಲಿ ನನ್ನ ಪಾತ್ರವಿಲ್ಲ ಎಂದು ಸ್ಪಷ್ಟಪಡಿಸಿದ್ದೇನೆ ಎಂದು ಹೇಳಿದರು.