ಮಹಾರಾಷ್ಟ್ರದಲ್ಲಿ ಮಳೆ ಅಬ್ಬರ: ಮೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಾರಾಷ್ಟ್ರದಲ್ಲಿ ಮಳೆ ಅಬ್ಬರಿಸುತ್ತಿದ್ದು, ಎಲ್ಲೆಡೆ ರಸ್ತೆಗಳು ಜಲಾವೃತಗೊಂಡಿವೆ. ಕೊಲ್ಹಾಪುರ, ಲೋನಾವಾಲಾ, ಪುಣೆ ಅಕ್ಷರಶಃ ನೀರಿನಲ್ಲಿ ಮುಳುಗಿವೆ. ಕೊಲ್ಹಾಪುರ, ಲೋನಾವಾಲಾ, ಪುಣೆಗೆ ರೆಡ್ ಅಲರ್ಟ್​ ನೀಡಲಾಗಿದ್ದು, ಥಾಣೆ, ರಾಯಗಢ, ಪಾಲ್ಗಢಕ್ಕೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಮುಂಬೈನಲ್ಲಿ ಗುರುವಾರ ಹಾಗೂ ಶುಕ್ರವಾರ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಮಧ್ಯ ಮಹಾರಾಷ್ಟ್ರದಲ್ಲಿ ರೆಡ್ ಅಲರ್ಟ್​ ಘೋಷಿಸಲಾಗಿದೆ. ಬುಧವಾರ ಮುಂಬೈನ ಹೊರವಲಯಗಳಾದ ಥಾಣೆ, ಕಲ್ಯಾಣ್ ಮತ್ತು ಪಾಲ್ಘಢನಲ್ಲಿ ಭಾರೀ ಮಳೆಯಾಗಿದೆ. ಕಲ್ಯಾಣ್, ಥಾಣೆ ಮತ್ತು ಮುಲುಂಡ್‌ನ ಹಲವಾರು ಭಾಗಗಳು ಜಲಾವೃತವಾಗಿವೆ.

ಮಳೆಯಿಂದಾಗಿ ಪುಣೆ ಗ್ರಾಮಾಂತರದ ಅಧರವಾಡಿ ಗ್ರಾಮದಲ್ಲಿ ಕಲ್ಲುಬಂಡೆ ಕುಸಿದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಈ ವೇಳೆ ಅಪಘಾತದಲ್ಲಿ ಮತ್ತೊಬ್ಬರು ಗಾಯಗೊಂಡಿದ್ದಾರೆ. ಈ ನಡುವೆ ಗುರುವಾರ ಮುಂಜಾನೆ ವಿದ್ಯುತ್ ಸ್ಪರ್ಶದಿಂದ ಮೂವರು ಸಾವನ್ನಪ್ಪಿದ್ದಾರೆ.

ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಕುಂಡಲಿಕಾ, ಅಂಬಾ, ಸಾವಿತ್ರಿ ಸೇರಿದಂತೆ ಹಲವು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ದೈನಂದಿನ ಜೀವನದಲ್ಲಿ ಅಸ್ತವ್ಯಸ್ಥಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಂದು ಮತ್ತು ನಾಳೆ ಮಹಾರಾಷ್ಟ್ರ ಮತ್ತು ಗುಜರಾತ್​ನಲ್ಲಿ ಭಾರೀ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಶುಕ್ರವಾರದವರೆಗೆ ಮಹಾರಾಷ್ಟ್ರದಲ್ಲಿ ಮಳೆಯಾದರೆ, ಗುಜರಾತ್​ನಲ್ಲಿ ಮುಂದಿನ ಮೂರು ದಿನ ವರುಣನ ಅರ್ಭಟ ಇರಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಗುಜರಾತ್​ನಲ್ಲೂ ಗುರುವಾರ ಸುರಿದ ಭಾರೀ ಮಳೆಗೆ 8 ಮಂದಿ ಸಾವನ್ನಪ್ಪಿದ್ದು, ಇದುವರೆಗೆ ಮಳೆ ಸಂಬಂಧಿ ಘಟನೆಯಲ್ಲಿ ಸಾವನ್ನಪ್ಪಿದರ ಸಂಖ್ಯೆ 61 ಆಗಿದೆ. ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಜನರ ರಕ್ಷಣಾ ಕಾರ್ಯದಲ್ಲಿ ಎನ್​ಡಿಆರ್​ಎಫ್​ ಮತ್ತು ಎಸ್​ಡಿಆರ್​ಎಫ್​ ಮುಂದಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!