ಹೊಸದಿಗಂತ ಡಿಜಿಟಲ್ ಡೆಸ್ಕ್;
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬ್ಯಾನರ್ ತೆರವುಗೊಳಿಸೋ ವಿಚಾರಕ್ಕಾಗಿ ಕಾಂಗ್ರೆಸ್ ಮುಖಂಡ ಶಿಡ್ಲಘಟ್ಟ ನಗರಸಭೆಯ ಪೌರಾಯುಕ್ತೆಗೆ ಅಶ್ಲೀಲವಾಗಿ ನಿಂದಿಸಿದ್ದಾರೆ.
ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ವಿರುದ್ಧ ಪೌರಾಯುಕ್ತೆ ಪೊಲೀಸರಿಗೆ ದೂರು ನೀಡಿದ್ದಾರೆ.
ಕೆಪಿಸಿಸಿ ರಾಜ್ಯ ಸಂಯೋಜಕ ಹಾಗೂ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ರಾಜೀವ್ ಗೌಡ ಸಚಿವ ಜಮೀರ್ ಅಹ್ಮದ್ ಅವರ ಪುತ್ರ ಝೈದ್ ಖಾನ್ ಅವರ ಕಲ್ಟ್ ಸಿನಿಮಾಗೆ ಸಂಬಂಧಿಸಿದ ಬ್ಯಾನರ್ ಅನ್ನು ಶಿಡ್ಲಘಟ್ಟ ನಗರದಲ್ಲಿ ಹಾಕಿದ್ದರು. ರಸ್ತೆ ಮಧ್ಯೆ ಹಾಕಿದ ಒಂದು ಬ್ಯಾನರ್‌ನಿಂದ ಅಪಘಾತ ನಡೆದ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಆ ಬ್ಯಾನರ್ ಅನ್ನು ತೆರವು ಮಾಡಲಾಗಿತ್ತು. ಈ ಬ್ಯಾನರ್ ಅನ್ನು ತೆರವು ಮಾಡಿದ್ದಕ್ಕೆ ಸಿಟ್ಟಾದ ರಾಜೀವ್ ಗೌಡ ಅವರು ಅಮೃತಾ ಗೌಡ ಅವರನ್ನು ಫೋನಿನಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಚಪ್ಪಲಿಯಲ್ಲಿ ಹೊಡೆಸಿ ನಗರಸಭೆಗೆ ಬೆಂಕಿ ಹಾಕಿಸುತ್ತೇನೆ. ದಂಗೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಕಾಂಗ್ರೆಸ್ ಮುಖಂಡನ ಬೆದರಿಕೆಗೆ ಭಯಭೀತರಾದ ಸಿಬ್ಬಂದಿ ಇಂದು ನಗರಸಭೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ.
ರಾಜೀವ್ ಗೌಡ ವಿರುದ್ಧ ದೂರು
ಇನ್ನು ಘಟನೆಗೆ ಸಂಬಂಧಿಸಿದಂತೆ ರಾಜೀವ್ ಗೌಡ ವಿರುದ್ಧ ಪೌರಾಯುಕ್ತೆ ಅಮೃತಾಗೌಡ ದೂರು ನೀಡಿದ್ದಾರೆ. ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ಠಾಣೆಗೆ ಅಮೃತ ಗೌಡ ದೂರು ನೀಡಿದ್ದಾರೆ. ರಾಜೇಗೌಡನ ವಿರುದ್ಧ ಕಠಿಣವಾದ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಈ ಘಟನೆಯಿಂದ ನಾನು ಮಾನಸಿಕವಾಗಿ ತೀವ್ರವಾಗಿ ಆಘಾತವಾಗಿದೆ ನಾನು ಇಲ್ಲಿ ಒಬ್ಬಳೇ ವಾಸವಿದ್ದೇನೆ ನನಗೆ ಸೂಕ್ತವಾದ ರಕ್ಷಣೆ ನೀಡಬೇಕು ಎಂದು ಅಮೃತ ಗೌಡ ದೂರಿನಲ್ಲಿ ಉಲ್ಲೇಖಿಸಿದ್ದಾರೆ.


