ಬೀದಿ ನಾಯಿಗಳಿಗೆ ಆಹಾರ ನೀಡಲು ಬಿಬಿಎಂಪಿಯಿಂದ ಮಾರ್ಗಸೂಚಿ ಬಿಡುಗಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೀದಿ ನಾಯಿಗಳಿಗೆ ಅಥವಾ ಬೆಕ್ಕುಗಳಿಗೆ ಆಹಾರ ನೀಡಲು ಬಿಬಿಎಂಪಿಯಿಂದ ಮಾರ್ಗಸೂಚಿ ಬಿಡುಗಡೆಯಾಗಿದೆ.

ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯ ಸಲಹೆ, ಕರ್ನಾಟಕ ಸಾಕುಪ್ರಾಣಿಗಳ ಸುತ್ತೋಲೆ ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ-1960 ಆಧರಿಸಿ ಬಿಬಿಎಂಪಿಯು ಪ್ರತ್ಯೇಕ ಮಾರ್ಗಸೂಚಿ ರಚಿಸಿ ಬಿಡುಗಡೆ ಮಾಡಿದೆ.

ನಾಯಿ, ಬೆಕ್ಕುಗಳಿಗೆ ಆಹಾರ ನೀಡುವಾಗ ಅಂತರವನ್ನು ಕಾಪಾಡಿಕೊಳ್ಳಬೇಕು. ನಾಯಿ, ಬೆಕ್ಕುಗಳು ಆಹಾರಕ್ಕಾಗಿ ಆಕ್ರಮಣ ಮಾಡದಂತೆ ನೋಡಿಕೊಳ್ಳಲು ಸಾಧ್ಯವಾದರೆ ಮಾತ್ರ ಸಾರ್ವಜನಿಕರು ಅವುಗಳಿಗೆ ಆಹಾರ ನೀಡಲು ಮುಂದಾಗಬೇಕು ಎಂದು ಸಲಹೆ ನೀಡಿದೆ.

ರಾತ್ರಿ 11.30ರ ನಂತರ, ಬೆಳಿಗ್ಗೆ 5ರ ಮೊದಲು ಆಹಾರ ನೀಡಬಾರದು. ಪ್ರಾಣಿಗಳಿಗೆ ಹಸಿ ಮಾಂಸ ಮತ್ತು ಹೆಚ್ಚಿನ ಸಕ್ಕರೆ ಅಂಶವಿರುವ ಬಿಸ್ಕತ್ತುಗಳನ್ನು ನೀಡಬಾರದು. ಈ ಆಹಾರ ತೀವ್ರ ಚುರುಕಿನ ಪ್ರಾಣಿಗಳನ್ನಾಗಿ ಮಾಡುತ್ತದೆ. ಆಹಾರವನ್ನು ಬೀದಿಯಲ್ಲಿ ಬಿಸಾಡಬಾರದು. ಇದರಿಂದ ಜನಸಂದಣಿ ಹೆಚ್ಚಿರುವ ಪ್ರದೇಶದಲ್ಲಿ ನಾಯಿಗಳಿಗೆ ಆಹಾರ ಸಿಗುವುದನ್ನು ತಪ್ಪಿಸಬಹುದು. ನಿಗದಿತ ಸ್ಥಳದಲ್ಲಿ ಮಾತ್ರ ಆಹಾರ ನೀಡಬೇಕು ಎಂದು ತಿಳಿಸಿದೆ.

 

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!