ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿಗೆ ಎಷ್ಟು ಸಲ ಹೇಳಿದ್ರೂ ಅರ್ಥ ಆಗ್ತಿಲ್ಲ, ಯಾವ ಅವ್ಯವಹಾರನೂ ನಡೆದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇಪ್ಪತ್ತು ವರ್ಷಗಳಿಂದ ಯಾವುದೇ ಆಕ್ಷೇಪ ಎತ್ತದ ವ್ಯಕ್ತಿಗಳನ್ನು ಎತ್ತಿ ಕಟ್ಟಿ ಹಕ್ಕುದಾರ ಎಂದು ಹೇಳಿ ರಾಜಕೀಯ ನಡೆಸುತ್ತಿರುವ ಬಿಜೆಪಿಯವರದು ಮನೆಮುರುಕ ರಾಜಕೀಯ. ಮುಡಾ ಜಮೀನು ಖರೀದಿಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ.
ಬಿಜೆಪಿ ಮತ್ತು ಜೆಡಿಎಸ್‌ನವರು ಹತಾಶೆಗೊಂಡಿದ್ದಾರೆ. ಕಾಂಗ್ರೆಸ್ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದಿದೆ. ಇದನ್ನು ಸಹಿಸಿಕೊಳ್ಳಲು ಬಿಜೆಪಿ ಮತ್ತು ಜೆಡಿಎಸ್‌ನವರಿಗೆ ಆಗ್ತಾ ಇಲ್ಲ. ಎರಡು ವಾರಗಳ ಅಧಿವೇಶನದಲ್ಲಿ ಎರಡು ವಿಚಾರಗಳೇ ಚರ್ಚೆ ಆಯ್ತು. ಮುಡಾ ಮತ್ತು ವಾಲ್ಮೀಕಿ ಹಗರಣ ಎರಡು ಬಿಟ್ಟು ರಾಜ್ಯದ ವಿಚಾರ ಬಗ್ಗೆ ಚರ್ಚೆ ನಡೆದಿಲ್ಲ. ಸರ್ಕಾರ ಮತ್ತು ಸಿಎಂ ಮುಖಕ್ಕೆ ಮಸಿಬಳಿಯುವ ಯತ್ನ ಮಾಡಿದ್ದಾರೆ. ಬಿಜೆಪಿ- ಜೆಡಿಎಸ್ ರಾಜಕೀಯವಾಗಿ ಹತಾಶರಾಗಿದ್ದಾರೆ.