ಅನಿಲ ಸೋರಿಕೆಯಿಂದ ಸ್ಫೋಟಗೊಂಡ ಆಟೋ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆಂಧ್ರಪ್ರದೇಶದ ವಿಜಯವಾಡದಲ್ಲಿ ಗ್ಯಾಸ್ ಸೋರಿಕೆಯಿಂದ ಆಟೋವೊಂದು ಸ್ಫೋಟಗೊಂಡಿದೆ.

ಪಿವಿಪಿ ಮಾಲ್ ಎದುರು ನಿಲ್ಲಿಸಿದ್ದ ಆಟೋದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ನಿಮಿಷಗಳಲ್ಲಿ ಸಂಪೂರ್ಣ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ.

ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಅಗ್ನಿಶಾಮಕ ದಳಕ್ಕೂ ಮಾಹಿತಿ ನೀಡಲಾಗಿದೆ. ಪೊಲೀಸರು ವರದಿ ಸಲ್ಲಿಸಿದ್ದು, ಆಟೋ ಸ್ಫೋಟಕ್ಕೆ ಕಾರಣವೇನು ಎಂಬುದನ್ನು ತನಿಖೆ ನಡೆಸುತ್ತಿದ್ದಾರೆ.

ಘಟನೆಯ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇದೀಗ ಎಲ್ಲೆಡೆ ವೈರಲ್ ಆಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!