ಹೊಸದಿಗಂತ ಡಿಜಿಟಲ್ ಡೆಸ್ಕ್;
ಚಿಕ್ಕಬಳ್ಳಾಪುರದ ಶಿಡ್ಲಘಟ್ಟದ ನಗರಸಭೆ ಆಯುಕ್ತೆಗೆ ಕಾಂಗ್ರೆಸ್ ಮುಖಂಡ ನಿಂದಿಸಿದ ಪ್ರಕರಣಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಕರೆ ಮಾಡಿದ ಕೇಂದ್ರ ಸಚಿವ ಹೆಚ್‌ಡಿಕೆ, ನೀವೂ ಒಬ್ಬ ಹೆಣ್ಣುಮಗಳಾಗಿ ನಿಮ್ಮ ಅಧೀನದಲ್ಲಿ ಕೆಲಸ ಮಾಡುವ ಮಹಿಳಾ ಅಧಿಕಾರಿಗಳಿಗೆ ರಕ್ಷಣೆ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದ್ರು ಎನ್ನಲಾಗಿದೆ.
ಅಧಿಕಾರಿಗಳಿಗೆ ಆವಾಜ್ ಹಾಕಿ ಅಶ್ಲೀಲ ಪದಗಳಿಂದ ನಿಂದಿಸಿದ್ರೆ ಅವರು ಕೆಲಸ ಮಾಡುವುದು ಹೇಗೆ? ಎಂದು ಪ್ರಶ್ನಿಸಿರುವ ಕುಮಾರಸ್ವಾಮಿ ಕೂಡಲೇ ರಾಜೀವ್ ಬಂಧಿಸಬೇಕು ಎಂದು ಮುಖ್ಯಕಾರ್ಯದರ್ಶಿ ಅವರಿಗೆ ಆಗ್ರಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.


