ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಕುರ್ಚಿಯ ಮೇಲೆ ಟವೆಲ್ ಹಾಕಿದವರಿಂದಲೇ ಮುಡಾ ಹಗರಣ ಬಯಲಾಗಿದೆ ಎಂಬ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಅಧಿಕಾರವಿರುವ ಯಾರಾದರೂ ಸಿಎಂ ಸ್ಥಾನಕ್ಕೆ ಆಸೆ ಪಡಬಹುದು. ಸಿಎಂ ಹುದ್ದೆಗೆ ನಮ್ಮಲ್ಲಿ ಸಾಕಷ್ಟು ಅರ್ಹರು ಇದ್ದಾರೆ. ಅರ್ಹತೆ ಇದ್ದವರು ಮುಖ್ಯಮಂತ್ರಿ ಆಗಲು ಟವೆಲ್ ಹಾಕುತ್ತಾರೆ. ಟವೆಲ್ ಹಾಕಿದವರು ಯಾರು ಎಂದು ಎಚ್.ಡಿ.ಕುಮಾರಸ್ವಾಮಿಯವರನ್ನು ದಯವಿಟ್ಟು ಕೇಳಿ ಎಂದು ಸಿದ್ದರಾಮಯ್ಯ ಹೇಳಿದರು.
ಈ ಹಂತದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೂಡ ಉಪಸ್ಥಿತರಿದ್ದರು.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಕುರಿತು ರಾಜ್ಯಪಾಲರು ವರದಿ ಕೋರಿದ್ದು, ಸಲ್ಲಿಸುತ್ತೇವೆ. ಎಲ್ಲವನ್ನೂ ಕಾನೂನು ಪ್ರಕಾರವೇ ಮಾಡಲಾಗಿದ್ದು, ವರದಿ ನೀಡುವುದಾಗಿ ತಿಳಿಸಿದರು.