ಹೊಸದಿಗಂತ ವರದಿ,ಮಡಿಕೇರಿ:
ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆ ಮತ್ತು ಗಾಳಿ ಮುಂದುವರೆದಿರುವುದರಿಂದ ಹಾಗೂ ಭಾರತೀಯ ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್ ಘೋಷಿಸಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಶಾಲಾ ಕಾಲೇಜುಗಳಿಗೆ (ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ಹೊರತುಪಡಿಸಿ) 27(ಶನಿವಾರ) ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಆದೇಶ ಹೊರಡಿಸಿದ್ದಾರೆ.