ಚಮ್ಮಾರನ ಅಂಗಡಿಗೆ ದಿಢೀರ್ ಭೇಟಿ ಕೊಟ್ಟ ರಾಹುಲ್ ಗಾಂಧಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಉತ್ತರ ಪ್ರದೇಶದಲ್ಲಿ ಇಂದು ಚಪ್ಪಲಿ ಹೊಲಿಯುವ ಚಮ್ಮಾರನ ಅಂಗಡಿಗೆ ದಿಢೀರ್ ಭೇಟಿ ನೀಡುವ ಮೂಲಕ ಗಮನ ಸೆಳೆದಿದ್ದಾರೆ.

ತಮ್ಮ ವಿರುದ್ಧ ದಾಖಲಾಗಿರುವ ಮಾನನಷ್ಟ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಸುಲ್ತಾನ್‌ಪುರದಲ್ಲಿರುವ ಸಂಸದರು ಮತ್ತು ಶಾಸಕರ ನ್ಯಾಯಾಲಯಕ್ಕೆ ರಾಹುಲ್ ಗಾಂಧಿ ಇಂದು ಹಾಜರಾಗಿದ್ದಾರೆ. ಈ ವೇಳೆ ಲಖನೌಗೆ ಹಿಂತಿರುಗುವ ವೇಳೆ ವಿಧಾಯಕ ನಗರದಲ್ಲಿ ಚಮ್ಮಾರನ ಅಂಗಡಿಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

ಕಾಂಗ್ರೆಸ್ ನಾಯಕನ ಅನಿರೀಕ್ಷಿತ ಭೇಟಿಯಿಂದ ಕಾರ್ಮಿಕ ರಾಮ್ ಚೆತ್ ಆಶ್ಚರ್ಯಚಕಿತಗೊಂಡಿದ್ದಾನೆ. ಬಳಿಕ ಅವರ ಹಾಗೂ ಕುಟುಂಬದ ಸಮಸ್ಯೆಗಳನ್ನು ರಾಹುಲ್ ಗಾಂಧಿ ಆಲಿಸಿರುವುದಾಗಿ ತಿಳಿಸಿದ್ದಾರೆ.

ಈ ವೇಳೆ ಇಬ್ಬರು ತಂಪು ಪಾನೀಯ ಸೇವಿಸಿದರು. ತಮ್ಮ ಸಮಸ್ಯೆಗಳನ್ನು ಬಗೆಹರಿಸಲು ಬೇಕಾದ ಕ್ರಮ ಕೈಗೊಳ್ಳುವುದಾಗಿ ರಾಹುಲ್ ಭರವಸೆ ನೀಡಿರುವುದಾಗಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

1 COMMENT

LEAVE A REPLY

Please enter your comment!
Please enter your name here

error: Content is protected !!