ಹೊಸದಿಗಂತ ವರದಿ,ಕಾರವಾರ :
ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ನೀಡಿದ ವರದಿಯಂತೆ ಜು.26 ರ ಮಧ್ಯಾಹ್ನ 1 ಗಂಟೆಯಿಂದ ಜು. 28 ಬೆಳಿಗ್ಗೆ 08. 30 ರವರೆಗೆ ಭಾರಿ ಮಳೆಯಾಗುವ ಸೂಚನೆ (ಆರೇಂಜ್ ಅಲರ್ಟ್) ಇರುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ದಾಂಡೇಲಿ, ಜೋಯಿಡಾ, ಯಲ್ಲಾಪುರ, ಶಿರಸಿ ಹಾಗೂ ಸಿದ್ದಾಪುರ ತಾಲ್ಲೂಕಿನಾದ್ಯಂತ ಎಲ್ಲಾ ಸರ್ಕಾರಿ, ಸರ್ಕಾರಿ ಅನುದಾನಿತ, ಅನುದಾನರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಪದವಿ ಪೂರ್ವ ಕಾಲೇಜುಗಳಿಗೆ, ಐ.ಟಿ.ಐ ಹಾಗೂ ಡಿಪ್ಲೋಮಾ ಕಾಲೇಜುಗಳಿಗೆ ಜು. 27 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ.